ಅ.5ರಂದು ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಕಾರ್ಯಕ್ರಮ | ನೂತನ ಜಿಲ್ಲಾ ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅವರಿಗೆ ಸನ್ಮಾನ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ವತಿಯಿಂದ ಅಕ್ಟೋಬರ್‌ 2ರ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್‌ 5ರಂದು ಸುಳ್ಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೆ.8ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ–2ರ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎನ್.ಎ. ರಾಮಚಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

. . . . . . .

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ–2ರ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ರೈ ಕಳಂಜ ಅವರನ್ನು ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸುಳ್ಯ ತಾಲೂಕು ಅಧ್ಯಕ್ಷ ವೆಂಕಪ್ಪಗೌಡ, ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ್, ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ, ಸುಳ್ಯ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ಸುಳ್ಯ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಭವಾನಿಶಂಕರ ಅಡ್ತಲೆ, ಮಹೇಶ್ ರೈ ಮೇನಾಲ, ಬೂಡು ರಾಧಾಕೃಷ್ಣ ರೈ, ಲೋಕನಾಥ ಅಮೆಚೂರು, ಕಡಬ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹೇಶ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಡಬ ತಾಲೂಕು ಯೋಜನಾಧಿಕಾರಿ ಪ್ರಶಾಂತ್, ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್, ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವಗೌಡ, ತಾಲೂಕು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರು, ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಮಾಸ್ಟರ್‌ ಹಾಗೂ ಕ್ಯಾಪ್ಟನ್‌ಗಳು, ಒಕ್ಕೂಟದ ಅಧ್ಯಕ್ಷರು ಮತ್ತು ಕಚೇರಿ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading