ಸುಳ್ಯ : ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ರೋಟರಿ ಪ್ರಾಥಮಿಕ ಶಾಲೆ ರಥಬೀದಿಯಲ್ಲಿ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ರೋಟರಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ರವರು ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ರೊ. ಮೇಜರ್ ಡೋನರ್ ಲತಾ ಮಧುಸೂದನ್ ಇವರು ವಹಿಸಿದ್ದರು.ವೇದಿಕೆಯಲ್ಲಿ ರೋಟರಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರುಗಳಾದ ರೊ. ಮೇಜರ್ ಡೋನರ್ ಮಧುಸೂದನ್ ಕುಂಭಕೋಡು, ರೊ. ಪಿಪಿ ಪಿಹೆಚ್ಎಫ್ ಡಾ|| ಪುರುಷೋತ್ತಮ ಕೆ.ಜೆ, IPP ರೊ. ಮೇಜರ್ ಡೋನರ್ ಡಾ| ರಾಮ್ ಮೋಹನ್ ಕೆ ಎನ್, ರೊ. ಹರಿರಾಯ ಕಾಮತ್, ರೊ. ವಸಂತ ಎ.ಸಿ, ಪ್ರೌಢಶಾಲಾ ಮುಖ್ಯಸ್ಥೆ ಶ್ರೀಮತಿ ವೀಣಾ ಶೇಡಿಕಜೆ ಮತ್ತು ಪ್ರಾಥಮಿಕ ಶಾಲಾ ಮುಖ್ಯಸ್ಥೆ ಶ್ರೀಮತಿ ಜ್ಯೋತ್ಸ್ನಾ. ಕೆ ಉಪಸ್ಥಿತರಿದ್ದರು.

. . . . . . .

ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಗೀತಾ ಎನ್ ವಂದಿಸಿದರು. ಸಮನ್ವಿತ ಮತ್ತು ತಂಡ ಪ್ರಾರ್ಥಿಸಿ, ಕು. ತನ್ವಿ ಕೆ.ಟಿ ಮತ್ತು ಕು. ದೃಶ್ಯ.ಎಸ್ ಕಾರ್ಯಕ್ರಮ ನಿರೂಪಿಸಿದರು.

ಈ ಪಂದ್ಯಾಟದ ಬಾಲಕರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನವನ್ನು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಗಳಿಸಿಕೊಂಡಿತು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಗಳಿಸಿಕೊಂಡಿದೆ. ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಬಾಲಕ ಬಾಲಕಿಯರ ವಿಭಾಗದಲ್ಲಿ ಶ್ರೇಯಸ್, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಹಾಗೂ ಶ್ರೇಯಾ ಸಿ.ಹೆಚ್, ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಪಡೆದುಕೊಂಡರು. ಉತ್ತಮ ರೈಡರ್ ಪ್ರಶಸ್ತಿಯನ್ನು ಯಶ್ವಂತ್, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಚಂದನಾ, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಪಡೆದುಕೊಂಡರು. ಉತ್ತಮ ಕ್ಯಾಚರ್ ಪ್ರಶಸ್ತಿಯನ್ನು ಪ್ರೀತಮ್, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಲವ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಪಡೆದುಕೊಂಡರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading