“ಮೂರ್ತೆದಾರರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಸಂಘಗಳ ಕೊಡುಗೆ ಮಹತ್ವದ್ದು” : ನಳಿನ್ ಕುಮಾರ್ ಕಟೀಲ್ | ಸುಳ್ಯದಲ್ಲಿ ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಶಾಖೆ ಉದ್ಘಾಟನೆ | ಮಾಜಿ ಸಚಿವ ರಮನಾಥ ರೈ ಅವರ 75ನೇ ಹುಟ್ಟುಹಬ್ಬ ಆಚರಣೆ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ., ಬಿ.ಸಿ. ರೋಡು ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ. 13ರಂದು ಗಾಂಧಿನಗರದ ಆರ್.ಕೆ. ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಮಾಜಿ ಸಚಿವ ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಿದರು. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

. . . . . . . . .

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, “ಎಲ್ಲಾ ರಂಗಗಳಲ್ಲೂ ಸಹಕಾರಿ ಸಂಘಗಳು ಆರಂಭಗೊಂಡಿವೆ. ಕೃಷಿ ಆಧಾರಿತವಾದ ನಮ್ಮ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿವೆ. ಕಷ್ಟದ ಬದುಕಿನಲ್ಲಿಯೂ ವ್ಯವಹಾರದ ಜಾಣ್ಮೆಯನ್ನು ಮೂರ್ತೆದಾರರ ಸಹಕಾರಿ ಸಂಘ ತೋರಿಸಿಕೊಟ್ಟಿದೆ. ಸುಳ್ಯದಲ್ಲಿ ಆರಂಭಗೊಂಡಿರುವ ಈ ಶಾಖೆ ಜನರಿಗೆ ಹೆಚ್ಚಿನ ಸಹಕಾರಿಯಾಗಲಿ” ಎಂದು ಹಾರೈಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕ ಕೆ.ಪಿ. ಜಾನಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್, ಅಜ್ಜಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಮಣ್ಣ ಪೂಜಾರಿ ಪಿ.ಕೆ., ಸುಳ್ಯ ತಾಲೂಕು ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ. ಸುಧಾಕರ ರೈ, ಬಿಎಂಎಸ್ ಸುಳ್ಯ ತಾಲೂಕು ಅಧ್ಯಕ್ಷ ಪ್ರಕಾಶ್ ಎಂ.ಎಸ್., ಆರ್.ಕೆ. ಕಾಂಪ್ಲೆಕ್ಸ್‌ನ ಕಟ್ಟಡ ಮಾಲೀಕ ರಾಮಕೃಷ್ಣ ರೈ, ಮಹಾಮಂಡಲದ ಉಪಾಧ್ಯಕ್ಷ ರಾಜೇಶ್ ಸುವರ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

. . . . . . .

ಮೂರ್ತೆದಾರರ ಸಹಕಾರಿ ಮಹಾಮಂಡಲದ ಮಾಜಿ ಅಧ್ಯಕ್ಷ ವಿಜಯಕುಮಾರ್ ಸೊರಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ವಂದಿಸಿ, ಚಂದ್ರಶೇಖರ ಹೈದಂಗೂರು ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದ ಅಂಗವಾಗಿ ಮಾಜಿ ಸಚಿವ ರಮಾನಾಥ ರೈ ಅವರ 75ನೇ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading