ಐನೆಕಿದು : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆಯನ್ನು ಐನೆಕಿದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಸತೀಶ್ ಕೂಜುಗೋಡು ವಹಿಸಿ, ವಿಶ್ವ ಸಾಕ್ಷರತಾ ದಿನದ ಮಹತ್ವ ಹಾಗೂ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕಾದ ಅಗತ್ಯತೆಯ ಕುರಿತು ಮಾತನಾಡಿದರು.

. . . . . . .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಜಿ R.C. ಲಯನ್ ಪ್ರೊ. ರಂಗಯ್ಯ ಶೆಟ್ಟಿಗಾರ್ ಉಪಸ್ಥಿತರಿದ್ದು, ತಮ್ಮ ಅಮೂಲ್ಯವಾದ ಮಾತುಗಳ ಮೂಲಕ ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರೇರೇಪಿಸಿದರು.

IPP ಲಯನ್ ವಿಮಲಾ ರಂಗಯ್ಯ, ಕಾರ್ಯದರ್ಶಿ ಲಯನ್ ವಿಷ್ಣು ಪ್ರಸಾದ್ ಪಾತಿಕಲ್ಲು, ಖಜಾಂಚಿ ಲಯನ್ ಪವನ್ ಎಂ.ಡಿ., ಲಯನ್ ಮಿಥುನ್ ಕೂಜುಗೋಡು ಸೇರಿದಂತೆ ಹಲವಾರು ಲಯನ್ಸ್ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading