ಸ್ಪಂದನ ಗೆಳೆಯರ ಬಳಗದ ವತಿಯಿಂದ ಅಡ್ತಲೆಯಲ್ಲಿ ಸಂಭ್ರಮದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಅಡ್ತಲೆ ಶಾಲಾ ವಠಾರದಲ್ಲಿ ಸೆಪ್ಟೆಂಬರ್ 13 ನೇ ಆದಿತ್ಯವಾರದಂದು ನಡೆಯಿತು. ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಡ್ತಲೆ-ಬೆದ್ರುಪಣೆ ಉಲ್ಲಾಕುಳು ಮತ್ತು ಮಲೆದೈವಗಳ ಚಾವಡಿಯ ಪೂಜಾರಿಗಳಾದ ಚಂದ್ರಶೇಖರ ಬೆದ್ರುಪಣೆ ಉದ್ಘಾಟನೆ ನೆರವೇರಿಸಿದರು. ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮುಕುಂದ ಡಿ. ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆಯ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಮುಖ್ಯ ಅತಿಥಿಗಳಾಗಿದ್ದರು. ನಂತರ ಶ್ರೀ ಕೃಷ್ಣ ವೇಷ ಸ್ಪರ್ಧೆ, ರಸಪ್ರಶ್ನೆ , ದಂಪತಿಗಳಿಗೆ, ಹಿರಿಯ ನಾಗರಿಕರಿಗೆ, ಮಕ್ಕಳಿಗೆ, ಸಾರ್ವಜನಿಕರಿಗೆ ವಿವಿಧ ಮನೋರಂಜನಾ ಕ್ರೀಡಾ ಸ್ಪರ್ಧೆಗಳು ನಡೆಯಿತು.

. . . . . . . . .

ಸಂಜೆ ನಡೆದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ ವಹಿಸಿದ್ದರು. ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಅಡ್ತಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಜಯಪ್ರಕಾಶ್ ಎಂ ಆರ್ , ಯುವಜನ ಸಂಯುಕ್ತ ಮಂಡಳಿ ರಿ. ಸುಳ್ಯ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಡಾ. ಲಕ್ಷ್ಮೀಶ್ ಕೆ ಎಸ್ , ನೆಹರು ಮೆಮೋರಿಯಲ್ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸೋಮಶೇಖರ ಪಿಂಡಿಮನೆ, ಮಾಜಿ ಸೈನಿಕರಾದ ನವೀನ್ ಪಿಂಡಿಮನೆ, ಅಡ್ತಲೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭವಾನಿಶಂಕರ ಅಡ್ತಲೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಹಿತ್ ಮೇಲಡ್ತಲೆ, ಚಂದನ ಯುವತಿ ಮಂಡಲದ ಅಧ್ಯಕ್ಷರಾದ ಸರಸ್ವತಿ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಿಶೋರ್ ಕುಮಾರ್ ಕಿರ್ಲಾಯ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕಾರ್ಯದರ್ಶಿ ರತನ್ ಕಿರ್ಲಾಯ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಕಿಶೋರ್ ಅಡ್ಕ ವಂದಿಸಿದರು. ಮಾಧ್ಯಮ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ರಂಜಿತ್ ಅಡ್ತಲೆ ನಿರೂಪಣೆಗೈದರು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಊರಿನ ಎಲ್ಲಾ ಸಾರ್ವಜನಿಕ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಸ್ಪಂದನ ಗೆಳೆಯರ ಬಳಗ ಹಾಗೂ ಚಂದನ ಯುವತಿ ಮಂಡಲದ ಸದಸ್ಯರುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading