ಮಾಸ್ ಅಧ್ಯಕ್ಷ ಸೀತಾರಾಮ ರೈ ಸವಣೂರು ರವರಿಂದ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ – ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರಿಗೆ ಸ್ಪೆಷಲ್ ಪ್ಯಾಕೇಜ್ ಘೋಷಿಸುವಂತೆ ಮನವಿ

ಮಂಗಳೂರು ಅಡಿಕೆ ಸಹಕಾರಿ ಸಂಘ(ಮಾಸ್) ಅಧ್ಯಕ್ಷರಾದ ಸವಣೂರು ಸೀತಾರಾಮ ರೈ ಯವರು ಕರ್ನಾಟಕ ಅರೋಗ್ಯ, ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್ ರವರನ್ನು ಭೇಟಿಯಾಗಿ 18ನೇ ತಾರೀಕಿಗೆ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ಸಹಾಯಕ್ಕೆ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.

. . . . . . . . .

ಸುಳ್ಯ, ಪುತ್ತೂರು, ಬೆಳ್ತಂಗಡಿ ಮತ್ತು ಮಲೆನಾಡು ಪ್ರದೇಶದ ಲಕ್ಷಾoತರ ಕೃಷಿಕರು ಅಡಿಕೆ ಬೆಳೆ ಯಿಂದ ಜೀವನ ಸಾಗಿಸುತ್ತಿದ್ದು,ಅಡಿಕೆ ಕೃಷಿಯು ಎಲೆ ಚುಕ್ಕಿ ರೋಗ, ಕೊಳೆ ರೋಗ, ಬೇರು ಹುಳು ರೋಗ ಗಳಿಂದ ನಾಶದ ಅಂಚಿನಲ್ಲಿದ್ದು ಅದನ್ನೇ ನಂಬಿ ಬದುಕುವ ಸಾವಿರಾರು ಕುಟುಂಬಗಳು ಚಿಂತಾಕ್ರಾಂತವಾಗಿದೆ, ಹವಾಮಾನ ವೈಫರೀತ್ಯ, ಬೆಳೆ ವಿಮೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ರೋಗಗಳ ಸಂಶೋಧನೆಗೆ ವಿಶೇಷ ಸಂಶೋಧನಾ ಕೇಂದ್ರ ಸ್ಥಾಪನೆ, ಬೆಳೆ ಸಾಲಮನ್ನಾ ದಂತಹ ಸಹಾಯಗಳನ್ನು ಮಾಡುವಂತೆ ವಿನಂತಿಸಿದರು.

. . . . . . .

ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಮಾಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್, ಚೀಫ್ ಮಾರ್ಕೆಟಿಂಗ್ ಮ್ಯಾನೇಜರ್ ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading