ತುಳು ಭಾಷೆಗೆ 2ನೇ ಹೆಚ್ಚುವರಿ ಅಧಿಕೃತ ಭಾಷಾ ಸ್ಥಾನಮಾನ: ಬಹುದಿನಗಳ ಬೇಡಿಕೆ ಈಡೇರಿಸಿರುವುದು ಸ್ವಾಗತಾರ್ಹ – ಭವಾನಿಶಂಕರ್ ಕಲ್ಮಡ್ಕ

ಸುಳ್ಯ: ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಆಡಳಿತಾತ್ಮಕ ಭಾಷೆಯಾಗಿ ಘೋಷಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಅಭಿನಂದನೆ ಸಲ್ಲಿಸಿದ್ದಾರೆ.

. . . . . . . . .

ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಎಂಬ ತುಳುನಾಡಿಗರ ಬಹುದಿನಗಳ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿದೆ. ಕನ್ನಡದೊಂದಿಗೆ ತುಳು ಭಾಷೆಯನ್ನು 2ನೇ ಹೆಚ್ಚುವರಿ ಅಧಿಕೃತ ಆಡಳಿತಾತ್ಮಕ ಭಾಷೆಯಾಗಿ ಘೋಷಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

. . . . . . .

ಭಾಷೆಯ ಬಳಕೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಚಟುವಟಿಕೆಗಳಿಗಾಗಿ ಪ್ರತಿವರ್ಷ ₹82 ಲಕ್ಷ ಅನುದಾನ ಘೋಷಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇದರಿಂದ ತುಳು ಭಾಷೆಯ ಬಳಕೆ, ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಭವಾನಿಶಂಕರ್ ಕಲ್ಮಡ್ಕ ತಿಳಿಸಿದ್ದಾರೆ.

ತುಳುವರ ದಶಕಗಳ ಕೂಗನ್ನು ಆಲಿಸಿ ತುಳು ಭಾಷೆಯನ್ನು 2ನೇ ಹೆಚ್ಚುವರಿ ಅಧಿಕೃತ ಆಡಳಿತಾತ್ಮಕ ಭಾಷೆಯಾಗಿ ಘೋಷಿಸುವ ಮೂಲಕ ದಶಕಗಳ ಹೋರಾಟಕ್ಕೆ ಸರ್ಕಾರ ನ್ಯಾಯ ಒದಗಿಸಿದೆ. ಈ ಮಹತ್ವದ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading