ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ನಡೆಯಿತು.

. . . . . . . . .

ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಎಂ.ಮುಸ್ತಾಫ ಇವರು “ಜೀವನದಲ್ಲಿ ಶಿಸ್ತು, ಕಲಿಕೆಯಲ್ಲಿ ಏಕಾಗ್ರತೆ, ಕ್ರೀಡಾ ಸ್ಪೂರ್ತಿಯು ವಿದ್ಯಾರ್ಥಿಗಳ ಸಾಧನೆಗೆ ಪೂರಕ ,ಸ್ಪರ್ಧೆಗಳಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ ಆದರೆ ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಪಂದ್ಯಾಟದಲ್ಲಿ ಭಾಗವಹಿಸಿ” ಎಂದು ಶುಭ ಕೋರಿದರು. ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ರೆ. ಫಾ. ಓಲ್ವಿನ್ ಎಡ್ವರ್ಡ್ ಡಿ’ಕುನ್ನ ಸಭಾಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

. . . . . . .

ವೇದಿಕೆಯಲ್ಲಿ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಜಯಪ್ರಕಾಶ್ ಕುಡೆಕಲ್ಲು,ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯರಾದ ಡೇವಿಡ್ ಧೀರ ಕ್ರಾಸ್ತಾ, ಸಿಆರ್‌ಪಿ ಮಮತಾ, ಸೈoಟ್ ಜೋಸೆಫ್ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಪ್ರಸನ್ನ ಪೀಟರ್ ಡಿ’ಸೋಜಾ, ರಾಜೇಶ್, ಛಾಯ, ಸಂತ ಬ್ರಿಜಿಟ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸುನಿಲ್ ಮಸ್ಕರೇನಸ್ ,ಸುಳ್ಯ ತಾಲೂಕು ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮನಾಭ ಎಡಮಂಗಲ ಉಪಸ್ಥಿತರಿದ್ದರು.

ಸುಳ್ಯ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಸುಜಯ ಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ವಾಲಿಬಾಲ್ ಸಂಘಟನೆ ಮಾಡಿದಕ್ಕಾಗಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹುದೇರಿ, ಉಮೇಶ್ ಪಂಜದ ಬೈಲು, ಸಹಕರಿಸಿ, ಸಹ ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ವಾಲಿಬಾಲ್ ಪಂದ್ಯಾಟದ ಯಶಸ್ವಿಗಾಗಿ ವಿದ್ಯಾ ಸಂಸ್ಥೆಯ ಎಲ್ಲ ಸಿಬ್ಬಂದಿಗಳು, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading