ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸುವುದನ್ನು ತಿರಸ್ಕರಿಸಿ ರಾಜ್ಯ ಸರ್ಕಾರ ನಿರ್ಣಯ | ಬದುಕಿನ ಭರವಸೆ ಮೂಡಿಸಿದ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಪೂರ್ವಜರ ಕಾಲದಿಂದಲೇ ನಾಗರಿಕ ಬದುಕು ಕಟ್ಟಿಕೊಂಡಿದ್ದ ರೈತರು, ಜನಸಾಮಾನ್ಯರ ಪರವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಸರ್ಕಾರದ ಐತಿಹಾಸಿಕ ನಿರ್ಣಯ. ಕರ್ನಾಟಕ ವಿಧಾನಸಭೆಯ ಸರ್ವ ಶಾಸಕರ ಸರ್ವಾನುಮತದಿಂದ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ತಿರಸ್ಕಾರ.
ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗಾಗಿ ಏಳನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದರ ಪರಿಣಾಮವಾಗಿ ಆತಂಕಗೊಂಡಿದ್ದ ರಾಜ್ಯದ ಜನರ ಪರವಾಗಿ ಎಲ್ಲಾ ಪಕ್ಷಗಳು, ಎಲ್ಲಾ ಜನಪ್ರತಿನಿಧಿಗಳು ಮತ್ತು ಎಲ್ಲಾ ಪಕ್ಷಗಳ ಕಾರ್ಯಕರ್ತರು, ಹೋರಾಟಗಾರರ ಕೂಗು ಆಲಿಸಿ ಕರ್ನಾಟಕ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ಕರೆದು ಸರ್ವ ಪಕ್ಷಗಳ ಶಾಸಕರುಗಳ ಸಮ್ಮುಖದಲ್ಲಿ ಒಕ್ಕೊರಲಿನ ನಿರ್ಣಯ ಮಂಡಿಸಿ, ರಾಜ್ಯದ ಸ್ಪಷ್ಟ ನಿರ್ಧಾರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 100 ದಿನಗಳಲ್ಲೇ ಯಶಸ್ವಿಯಾಗಿರುವ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಕಸ್ತೂರಿ ರಂಗನ್ ವರದಿ ಬಾಧಿತ ಪ್ರದೇಶದ ನಾಗರಿಕರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ನಿರ್ಣಯವು ಪಶ್ಚಿಮ ಘಟ್ಟವನ್ನು ರಕ್ಷಿಸುತ್ತಾ ಬಂದಿರುವ ಸಮಸ್ತ ರೈತರ ಮತ್ತು ಮೂಲವಾಸಿಗಳ ಗೆಲುವು.
ಪಶ್ಚಿಮ ಘಟ್ಟದ ತಪ್ಪಲಿನ ಜನವಸತಿ ಪ್ರದೇಶಗಳನ್ನು ಕಸ್ತೂರಿ ರಂಗನ್ ವರದಿಯನುಸಾರದ ಪರಿಸರ ಸೂಕ್ಷ್ಮ ವಲಯದಿಂದ ಕೈ ಬಿಡಲು ಕೇರಳ ಮಾದರಿಯಲ್ಲಿ ಸಮೀಕ್ಷೆ, ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮತ್ತು ಈ ಪ್ರಕ್ರಿಯೆಗಾಗಿ ಕನಿಷ್ಠ ಒಂದು ವರ್ಷ ಕಾಲಾವಕಾಶ ಹಾಗೂ ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಹೋರಾಟಕ್ಕೂ ಸಿದ್ಧ ಎಂಬುದಾಗಿ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಅಭಯವನ್ನು ನೀಡಿದ್ದಾರೆ.
ಸುಳ್ಯ ಬ್ಲಾಕ್ ನ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ, ಕಸ್ತೂರಿ ರಂಗನ್ ವರದಿ ಬಾಧಿತ ಪ್ರದೇಶವಾದ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಯಾಗಿ ನಮ್ಮ ಮೆಚ್ಚಿನ ಮುಖ್ಯಮಂತ್ರಿಗಳ ಜನಪರ ಕಾಳಜಿಗೆ ಅತೀವವಾದ ಹೆಮ್ಮೆಪಡುತ್ತೇನೆ. ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಯತ್ನಿಸಿ ಹೊರಡಿಸಿದ್ದ ಏಳನೇ ಅಧಿಸೂಚನೆ ವಿರೋಧಿಸಿ ಹೋರಾಟ ನಡೆಸಿದ ನಮ್ಮೆಲ್ಲರ ಹೋರಾಟಕ್ಕೆ, ನಮ್ಮ ಅಹವಾಲುಗಳಿಗೆ ಸ್ಪಂದಿಸಿ ಬದುಕಿನ ಭರವಸೆ ಮೂಡಿಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ನಮ್ಮ ಬದುಕಿನುದ್ದಕ್ಕೂ ಶಾಶ್ವತವಾಗಿ ನೆನೆಯುತ್ತೇವೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಹೇಳಿಕೆಯಲ್ಲಿ ತಿಳಿಸಿದ್ಸಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading