ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಲಿತೇಶ್ ಪೀಚೆ ರಾಜ್ಯಮಟ್ಟಕ್ಕೆ ಆಯ್ಕೆ

ಸೆ.23: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ ಸದಸ್ಯ ಲಿತೇಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

. . . . . . . . .

ಇವರು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ದಿ| ಉತ್ತರಕುಮಾರ ಪೀಚೆ ಮತ್ತು ಸುಶೀಲ ದಂಪತಿಯ ಪುತ್ರ. ಇವರು ಪ್ರಸ್ತುತ SDM ಉಜಿರೆ ಇಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರಿಗೆ ದೈಹಿಕ ನಿರ್ದೇಶಕರಾದ ಸಂದೇಶ್ ಬಿ ಪೂಂಜಾ ಇವರು ತರಬೇತಿ ನೀಡುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading