ಜಾನುವಾರು ಕಳ್ಳತನದ ಆರೋಪಿಗಳು ದೋಷಮುಕ್ತ

ಸುಳ್ಯ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಅಭಿಯೋಜನೆ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

. . . . . . . . .

2023ರ ಜ.21ರಂದು ರಾತ್ರಿ ಸುಮಾರು 9 ಗಂಟೆಗೆ ಸುಳ್ಯ ಕಸಬಾ ಗ್ರಾಮದ ಗುರುಂಪು ಎಂಬಲ್ಲಿ ಸುಳ್ಯ–ನಾಗಪಟ್ಟಣ ಡಾಮರು ರಸ್ತೆಯ ಬದಿಯಲ್ಲಿದ್ದ ಕಂದು ಬಣ್ಣದ ಎರಡು ಹೋರಿ ಕರುಗಳನ್ನು ಆಸ್ಕರ್ ಹಾಗೂ ಉಸ್ಮಾನ್ ಎಂಬವರು ಮಾರುತಿ 800 ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸುಳ್ಯ–ಅಲೆಟ್ಟಿ ರಸ್ತೆಯ ಮೂಲಕ ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು.

. . . . . . .

ರಾತ್ರಿ ಸುಮಾರು 9.30ಕ್ಕೆ ಅಲೆಟ್ಟಿ ಗ್ರಾಮದ ಮಿತ್ತಡ್ಕದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಆಸ್ಕರ್ ಗಾಯಗೊಂಡಿದ್ದು, ಸ್ಥಳೀಯರು ಸ್ಥಳಕ್ಕೆ ಬಂದ ವೇಳೆ ಉಸ್ಮಾನ್ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.ಈ ಸಂಬಂಧ ಸುಳ್ಯ ಪೊಲೀಸರು ಐಪಿಸಿ ಕಲಂ 279 ಹಾಗೂ ಕರ್ನಾಟಕ ಜಾನುವಾರು ಪ್ರತಿಬಂಧಕ ಆದ್ಯಾದೇಶ ಕಾಯ್ದೆ 2020ರ ಕಲಂ 5, 6 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಸುಳ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ಹಿರಿಯ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶೆ ಶ್ರೀಮತಿ ತಟ್ಟಂಡ ದಮಯಂತಿ ಸೋಮಯ್ಯ ಅವರು, ಆರೋಪಿಗಳ ವಿರುದ್ಧ ಮಾಡಲಾಗಿದ್ದ ಆರೋಪಗಳನ್ನು ಅಭಿಯೋಜನೆ ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಸೆ.25ರಂದು ಆಸ್ಕರ್ ಮತ್ತು ಉಸ್ಮಾನ್ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದರು.ಆರೋಪಿಗಳ ಪರವಾಗಿ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಎನ್.ಕೆ. ಹಾಗೂ ವಿಮಲೇಶ್ ಗೌಡ ಅವರು ವಾದಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading