“ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಸಂಪತ್ತು” : ನ್ಯಾಯಾಧೀಶೆ ಟಿ. ದಮಯಂತಿ ಸೋಮಯ್ಯ

ಸುಳ್ಯ : ಸಂಧ್ಯಾ ಚೇತನ ಸುಳ್ಯ ತಾಲೂಕು ಹಿರಿಯ ನಾಗರಿಕರ ಸಂಘ ಹಾಗೂ ಸಂಧ್ಯಾರಶ್ಮಿ ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.), ಸುಳ್ಯ ಇದರ ಸಭಾಂಗಣದಲ್ಲಿ ಅ.1ರಂದು ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.

. . . . . . . . .

ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಟಿ. ದಮಯಂತಿ ಸೋಮಯ್ಯ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಸಂಪತ್ತಾಗಿದ್ದು, ಅವರ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಿರಿಯರನ್ನು ಗೌರವದಿಂದ ಕಾಣುವುದು ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವುದು ಸಮಾಜದ ಕರ್ತವ್ಯವಾಗಿದೆ” ಎಂದು ಹೇಳಿದರು.

. . . . . . .

ಪರಿಸರ ಸಂರಕ್ಷಣೆಯ ಅಂಗವಾಗಿ ಸಂಧ್ಯಾರಶ್ಮಿ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ನಾಗರಿಕರಿಗೆ ಸಸಿಗಳನ್ನು ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚಂಪಾ ವಿ.ಜಿ. ಅವರು ಹಿರಿಯ ನಾಗರಿಕರ ದಿನದ ಮಹತ್ವ ಹಾಗೂ ಹಿರಿಯ ನಾಗರಿಕರ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿ ಸುಕುಮಾರ್ ಕೊಡ್ತುಗುಳಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಕೆ.ವಿ. ದಾಮೋದರ ಗೌಡ ಅವರು ಅಧ್ಯಕ್ಷೀಯ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಹಾಗೂ ವಕೀಲರಾದ ಜಗದೀಶ ಹುದೇರಿ, ಪಿ. ಭಾಸ್ಕರ ರಾವ್, ಚಂದ್ರಶೇಖರ ಯು., ಹರೀಶ್ ಬಿ. ಹಾಗೂ ನ್ಯಾಯಾಲಯದ ಸಿಬ್ಬಂದಿಗಳಾದ ಲಾವಣ್ಯ ಮತ್ತು ಐಶ್ವರ್ಯ ಉಪಸ್ಥಿತರಿದ್ದರು.

ಪದ್ಮನಾಭ ನಾಯರ್ ಪ್ರಾರ್ಥಿಸಿದರು. ಕೇಶವ ಮಾಸ್ಟರ್ ಹೊಸಗದ್ದೆ ಸ್ವಾಗತಿಸಿದರು. ಚಂದ್ರಶೇಖರ ಯು. ವಂದಿಸಿದರು. ಹರೀಶ್ ಬೂಡುಪನ್ನೆ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading