ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಏಳು ವಿದ್ಯಾರ್ಥಿಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

. . . . . . . . .

ಶಾಲೆಯ ವಿದ್ಯಾರ್ಥಿಗಳಾದ ಅದ್ವಿತಿ ಬಂಜನ್, ಗ್ರಹಿತ್ ಆರ್. ಶೆಟ್ಟಿ, ಪ್ರತ್ಯುಷ್, ಮಹಮ್ಮದ್ ರಶಾನ್, ಹೆಶ್ವಿತ್, ಮರಿಯಂ ಅಫೀಫ ಹಾಗೂ ವಿಭಾಶ್ ವಿ.ಪಿ. ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ್ದಾರೆ.

. . . . . . .

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಹಾಗೂ ಪ್ರಾಂಶುಪಾಲ ಸುಮಿತ್ರಾ ಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.

ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಮಾರ್ಗದರ್ಶನ ನೀಡಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading