ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿಯಾಗಿ ಮೃತ್ಯು

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ.

. . . . . . . . .

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕಡವೆ ಏಕಾಏಕಿ ಅಡ್ಡ ಬಂದಿದ್ದು, ಡಿಕ್ಕಿಯ ಪರಿಣಾಮ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ. ಡಿಕ್ಕಿಯ ಬಳಿಕ ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿರುವುದು ಕಂಡುಬಂದಿದೆ.
ಘಟನೆಯಿಂದಾಗಿ ವಾಹನ ಸವಾರರಲ್ಲಿ ಆತಂಕ ಮೂಡಿದ್ದು, ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಇರುವುದರಿಂದ ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಕಾಡುಪ್ರಾಣಿಗಳಿಂದ ವಾಹನಗಳಿಗೆ ಅಪಾಯ ಉಂಟಾಗಿರುವ ಘಟನೆಗಳು ನಡೆದಿವೆ.

. . . . . . .

ಕಾಡುಪ್ರಾಣಿಗಳ ಸಂಚಾರ ಇರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣ ಹಾಗೂ ರಸ್ತೆ ಬದಿಯ ಪೊದೆಗಳ ನಿರ್ವಹಣೆ ಅಗತ್ಯ ಎಂಬುದು ಸ್ಥಳೀಯರ ಅಭಿಪ್ರಾಯ. ಈ ಕುರಿತು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading