ಅ. 8ರಂದು ಚೆನ್ನಕೇಶವ ದೇವಸ್ಥಾನದ ಬಳಿ ಬೃಹತ್ ಪ್ರತಿಭಟನಾ ಸಭೆ | ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಪತ್ರಿಕಾಗೋಷ್ಠಿ

ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ಪ್ರದೇಶದ ಮಲೆನಾಡಿನ ಜನರ ಬದುಕಿಗೆ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರದಿಯ ವ್ಯಾಪ್ತಿಗೆ ಸುಳ್ಯ ತಾಲೂಕಿನ 15ರಿಂದ 16 ಗ್ರಾಮಗಳು ಒಳಪಡುತ್ತಿದ್ದು, ಇದರಿಂದ ಬಡವರು ಹಾಗೂ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಮುಖಂಡ ಅಶೋಕ್ ಪೀಚೆಮನೆ ಹೇಳಿದರು.

. . . . . . . . .

ಸುಳ್ಯದ ಪತ್ರಿಕಾಭವನದಲ್ಲಿ ಅ. 6ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 8ರಂದು ಬೆಳಗ್ಗೆ 10.30ಕ್ಕೆ ಸುಳ್ಯದ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಕಿಶೋರ್ ಕುಮಾರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನರಿಗೆ ಆಗಬಹುದಾದ ಅನಾನುಕೂಲಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

. . . . . . .

ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಗ್ರಾಮಗಳ ವಾಸ್ತವ ಪರಿಸ್ಥಿತಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಸರ್ವೆ ನಡೆಸಬೇಕು. ಜನವಸತಿ ಪ್ರದೇಶ, ಕೃಷಿ ಭೂಮಿ ಹಾಗೂ ಅರಣ್ಯ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಪ್ರತ್ಯೇಕಗೊಳಿಸುವ ಮೂಲಕ ಸ್ಥಳೀಯ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ, ಆನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವುದರ ಜತೆಗೆ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಜಯರಾಮ ನಾರ್ಕೋಡು, ಸತೀಶ್ ಚಂದ್ರ ಪಟ್ರುಕೋಡಿ ಹಾಗೂ ಭುವನೇಂದ್ರ ದಾಸ್ ಉಬರಡ್ಕ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading