ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ಬದುಕಿಗೆ ತೊಂದರೆ ಆಗುವ ಕಾಯ್ದೆಗಳ ಜಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅರಣ್ಯ ಹಾಗೂ ಕಂದಾಯ ಇಲಾಖೆಗಳ ಕಾಯ್ದೆಗಳ ಜಾರಿ ಮತ್ತು ಅಧಿಕಾರಿಗಳ ಧೋರಣೆಯನ್ನು ವಿರೋಧಿಸಿ ಅ. 8ರಂದು ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಮಲೆನಾಡು ಭಾಗದ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಭೂಮಿ ಹಾಗೂ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು.

. . . . . . . . .

ಪ್ರತಿಭಟನೆಯಲ್ಲಿ ಮಾತನಾಡಿದ ಕಿಶೋರ್ ಶಿರಾಡಿ, ವಿವಿಧ ಕಾಯ್ದೆಗಳ ಜಾರಿ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಸೂಕ್ತ ಸರ್ವೆ ನಡೆಸದೆ ಜನವಸತಿ ಪ್ರದೇಶಗಳನ್ನು ಅರಣ್ಯ ಭೂಮಿಗೆ ಸೇರಿಸಲಾಗುತ್ತಿದೆ. ಬಫರ್ ಝೋನ್ ವಿಚಾರದಲ್ಲಿಯೂ ಗೊಂದಲ ಸೃಷ್ಟಿಸಿ ರೈತರಿಗೆ ತೊಂದರೆ ನೀಡಲಾಗುತ್ತಿದೆ ಎಂದರು.

. . . . . . .

ದಶಕಗಳಿಂದ ಮಲೆನಾಡಿನಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಯಾವುದೇ ಕ್ರಮ ಕೈಗೊಳ್ಳಬಾರದು. ರೈತರ ಭೂಮಿ ಹಾಗೂ ಹಕ್ಕುಗಳ ರಕ್ಷಣೆಗೆ ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಅವರು ಕರೆ ನೀಡಿದರು. ಮಲೆನಾಡು ಭಾಗದ ಜನರ ಭೂಮಿ ಹಾಗೂ ಹಕ್ಕುಗಳನ್ನು ಕಸಿಯುವ ಯಾವುದೇ ಪ್ರಯತ್ನ ನಡೆದರೆ, ಮುಂದಿನ ದಿನಗಳಲ್ಲಿ ಬುದ್ಧಿಜೀವಿಗಳು ಹಾಗೂ ತಜ್ಞರ ತಂಡವನ್ನು ರಚಿಸಿ ದಾಖಲೆಗಳ ಆಧಾರದಲ್ಲಿ ಮತ್ತಷ್ಟು ಸಂಘಟಿತ ಹಾಗೂ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿಸಿ ಜಯರಾಮ, ನ. ಪಂ. ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಎಸ್. ಎನ್. ಮನ್ಮಥ, ಚಂದ್ರ ಕೊಲ್ಚಾರ್, ಸಂತೋಷ್ ಕುತ್ತಮೊಟ್ಟೆ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading