ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಗಾಂಧಿಜಯಂತಿ ಪ್ರಯುಕ್ತ ಮಯೂರಿ ಯುವತಿ ಮಂಡಲ, ಚೊಕ್ಕಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

. . . . . . . . .

ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿಯ ಅಂಗನವಾಡಿ ಕೇಂದ್ರ, ಪ್ರಯಾಣಿಕರ ತಂಗುದಾಣ ಹಾಗೂ ಅಜ್ಜನಗದ್ದೆ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಮಯೂರಿ ಯುವತಿ ಮಂಡಲದ ಸದಸ್ಯರು ಹಾಗೂ ಅಜ್ಜನಗದ್ದೆ ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

. . . . . . .

ಈ ಸಂದರ್ಭದಲ್ಲಿ ಸ್ವಚ್ಛತೆಯ ಮಹತ್ವ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯ ಕುರಿತು ಅರಿವು ಮೂಡಿಸಲಾಯಿತು. “ಸ್ವಚ್ಛ ಪರಿಸರ – ಆರೋಗ್ಯಕರ ಸಮಾಜ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ಮಯೂರಿ ಯುವತಿ ಮಂಡಲದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಅಜ್ಜನಗದ್ದೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading