ಬೆಳ್ಳಾರೆಯಲ್ಲಿ ನಮ್ಮ ಹಬ್ಬ ನಮ್ಮ ಸೇವೆ “ನವರಂಗ್ 2026” ಉದ್ಘಾಟನೆ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ನಮ್ಮ ಹಬ್ಬ ನಮ್ಮ ಸೇವೆ ‘ನವರಂಗ್ 2026’ ಇದರ ಉದ್ಘಾಟನಾ ಸಮಾರಂಭ ಹಾಗೂ ಮೊದಲ ದಿನ ಆರೋಗ್ಯ ನವರಂಗ್ ಕಾರ್ಯಕ್ರಮದಲ್ಲಿ ಹದಿಹರೆಯದ ಮಾನಸಿಕ ಆರೋಗ್ಯ ವಿಷಯದ ತರಬೇತಿ ಕಾರ್ಯಕ್ರಮ ನಡೆಯಿತು.

. . . . . . . . .

ರೋಟರಿ ಜಿಲ್ಲೆ 3181 ಇದರ ವಲಯದ ಸಂಯೋಜಕ ಶಶಿಧರ್ ಬಿ ಕೆ ಒಂಬತ್ತು ದಿನ ಒಂಬತ್ತು ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

. . . . . . .

ಹದಿ ಹದಿಹರೆಯದ ಮಾನಸಿಕ ಆರೋಗ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮನೋ ಸಮಾಲೋಚಕ ಅನ್ಸಾರ್ ಮುಡಿಪು ತರಬೇತಿ ನೀಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ ಎಂ ಅಧ್ಯಕ್ಷತೆ ವಹಿಸಿದ್ದರು.

ಝೋನಲ್ ಲೆಫ್ಟಿನೆಂಟ್ ಚಂದ್ರಶೇಖರ್ ರೈ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ರೋಶನ್ ಫೆರ್ನಾಂಡಿಸ್, ಜ್ಞಾನದೀಪ ಶೈಕ್ಷಣಿಕ ಸಲಹಾ ಸಮಿತಿ ಉಪಾಧ್ಯಕ್ಷ ಉಮೇಶ್ ರೈ ಮರುವಂಜ,ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಕಾರ್ಯದರ್ಶಿ ಪ್ರಶಾಂತ್ ಟಿ ಎಂ,ಇಂಟರ್ಯಾಕ್ಟ್ ಕಾರ್ಯದರ್ಶಿ ಕೀರ್ತನಾ ಉಪಸ್ಥಿತರಿದ್ದರು.ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ, ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿ ಶೇಣಿ ವಂದಿಸಿದರು. ಉಪನ್ಯಾಸಕ ವಿಜೇತ್ ಸುವರ್ಣ ಕೆ ವಿ ಕಾರ್ಯಕ್ರಮ ನಿರ್ವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading