ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಸಂಘದ ವತಿಯಿಂದ “ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಉದಯೋನ್ಮುಖ ಕೌಶಲ್ಯಗಳು ಹಾಗೂ ವೃತ್ತಿ ಅವಕಾಶಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಅಕ್ಟೋಬರ್ 09ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಕರ್ನಾಟಕ ಬ್ಯಾಂಕ್‌ ಬೆಂಗಳೂರಿನ ಎಚ್‌ಬಿಆರ್ ಲೇಔಟ್ ಶಾಖೆಯ ಹಿರಿಯ ವ್ಯವಸ್ಥಾಪಕರಾದ ಗುರುಪ್ರಸಾದ್.ಎಸ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಪ್ರಸ್ತುತ ಎದುರಾಗುತ್ತಿರುವ ಬದಲಾವಣೆಗಳು, ಅಗತ್ಯ ಕೌಶಲ್ಯಗಳು ಹಾಗೂ ಲಭ್ಯವಿರುವ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

. . . . . . .

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳ ಬಗ್ಗೆ ತಿಳುವಳಿಕೆ ಮೂಡಿಸುವುದು, ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವುದು ಹಾಗೂ ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ವಾಣಿಜ್ಯ ವಿಭಾಗದ ಸoಯೋಜಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀಧರ ವಿ ಹಾಗೂ ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ, ವಾಣಿಜ್ಯ ಸಂಘದ ಸಂಚಾಲಕಿ ದಿವ್ಯಾ ಟಿ.ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಾಣಿಜ್ಯ ಸಂಘದ ಪ್ರತಿನಿಧಿಗಳಾದ ಅಂತಿಮ ಬಿ.ಕಾಂ.ನ ಗೌತಮ್ ಮತ್ತು ಚಶ್ಮಿತಾ ಹಾಗೂ ಅಂತಿಮ ಬಿಕಾಂ ತರಗತಿ ಪ್ರತಿನಿಧಿಗಳಾದ ಅಭಿನಂದನ್ ಮತ್ತು ಅನ್ವಿತಾ ಆರ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೃತೀಯ ಬಿ.ಕಾಂ.ನ ಕು. ಅಕ್ಷತಾ ಎಂ.ಜೆ. ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಕು. ಅನ್ವಿತಾ ಆರ್. ಭಟ್ ಅತಿಥಿಗಳನ್ನು ಪರಿಚಯಿಸಿ, ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕು. ಲಿಯಾ ವಂದನಾರ್ಪಣೆ ಸಲ್ಲಿಸಿದರು.ದ್ವಿತೀಯ ಬಿ.ಕಾಂನ ಕು. ಅರ್ಷಿದಾ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading