“ಗುದ್ದಲಿಪೂಜೆ, ಉದ್ಘಾಟನೆಗೆ ಕಾಂಗ್ರೆಸ್ ಪ್ರತಿನಿಧಿಗಳು, ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ” : ಟಿ.ಎಂ. ಶಹೀದ್ ತೆಕ್ಕಿಲ್ ಆರೋಪ

ಸುಳ್ಯ : “ಸರಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಡೆಯುವ ಗುದ್ದಲಿಪೂಜೆ ಹಾಗೂ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಶಾಸಕರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿ, ಕಾಂಗ್ರೆಸ್ ಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ” ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಆರೋಪಿಸಿದರು.

. . . . . . . . .

“ವಿವಿಧ ಗ್ರಾಮಗಳಲ್ಲಿ ಸರಕಾರಿ ಅನುದಾನದ ಕಾಮಗಾರಿಗಳಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಮಾತ್ರ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದರು.

. . . . . . .

ಅಡಿಕೆ ಬೆಳೆಗಾರರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ : “ಅಡಿಕೆ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕೃಷಿ ಸಚಿವರನ್ನು ಕರೆತರುವುದಾಗಿ ಸಂಸದರು ಹೇಳಿ ಎರಡು ವರ್ಷ ಕಳೆದಿದ್ದರೂ, ಈವರೆಗೆ ಸಚಿವರು ಬಂದಿಲ್ಲ. ಹಳದಿ ರೋಗದಿಂದ ಬಾಧಿತರಾಗಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ಪರಿಹಾರ ದೊರೆತಿಲ್ಲ” ಎಂದು ಶಹೀದ್ ಆರೋಪಿಸಿದರು.ಬಿಜೆಪಿಯವರಿಗೆ ಅಭಿವೃದ್ಧಿ ಮತ್ತು ಜನಪರ ಕಾಳಜಿ ಇಲ್ಲ ಎಂದು ಅವರು ಟೀಕಿಸಿದರು.

ವಿದ್ಯುತ್ ಸಮಸ್ಯೆ ಕುರಿತು ಮುಂದಿನ ವಾರ ಮೆಸ್ಕಾಂ ಅಧಿಕಾರಿಗಳ ಸಭೆ : ಸುಳ್ಯದಲ್ಲಿ ತೀವ್ರಗೊಂಡಿರುವ ವಿದ್ಯುತ್ ಸಮಸ್ಯೆಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಹೀದ್, ವಿದ್ಯುತ್ ಸಮಸ್ಯೆಯ ಬಗ್ಗೆ ಇಂಧನ ಸಚಿವರು ಹಾಗೂ ಮೆಸ್ಕಾಂ ಅಧ್ಯಕ್ಷರ ಗಮನಕ್ಕೆ ತರಲಾಗಿದೆ. ಮುಂದಿನ ವಾರ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸುವುದಾಗಿ ಮೆಸ್ಕಾಂ ಅಧ್ಯಕ್ಷರು ತಿಳಿಸಿದ್ದಾರೆ ಎಂದು ಹೇಳಿದರು.

ಮತ ಕಳ್ಳತನದ ವಿರುದ್ಧ ಪಾದಯಾತ್ರೆ : ಮತ ಕಳ್ಳತನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ಬ್ಲಾಕ್ ಮಟ್ಟದಲ್ಲಿ ಪಾದಯಾತ್ರೆಗಳನ್ನು ನಡೆಸಲು ಕೆಪಿಸಿಸಿ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದಿಕ್ ಕೊಕ್ಕೊ, ಸಲೀಂ ಪೆರಂಗೋಡಿ, ರಕ್ಷಿತ್ ದೊಡ್ಡಡ್ಕ ಹಾಗೂ ಗಣೇಶ್ ನಾಗಪಟ್ಟಣ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading