ಟಿ.ಎಂ. ಶಾಹಿದ್ ಹೇಳಿಕೆಗೆ ಬಿಜೆಪಿ ಖಂಡನೆ – “ಅಡಿಕೆ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರದ ವಿಶ್ವಾಸವಿದೆ” : ವೆಂಕಟ್ ವಳಲಂಬೆ

ಸುಳ್ಯ : ಕಾಂಗ್ರೆಸ್ ಸರಕಾರದ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, “ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆ” ಎಂದಿದ್ದಾರೆ.“ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಗಂಭೀರತೆಯನ್ನು ಕೇಂದ್ರ ಸರಕಾರದ ಸಚಿವರ ಗಮನಕ್ಕೆ ತಂದು, ತಜ್ಞರು ಹಾಗೂ ಸಿಪಿಸಿಆರ್‌ಐ (CPCRI) ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಯಲಿದೆ ಎಂಬ ವಿಶ್ವಾಸ ನಾಡಿನ ಜನರಿಗಿದೆ” ಎಂದು ಅವರು ಹೇಳಿದ್ದಾರೆ.

. . . . . . . . .

ಸುಳ್ಯದ ಸಮಸ್ಯೆಗಳಿಗೆ ಏನು ಪರಿಹಾರ ಕಲ್ಪಿಸಿದ್ದೀರಿ..? : “ನಿಮ್ಮ ಉಸ್ತುವಾರಿ ಸಚಿವರನ್ನು ಸುಳ್ಯಕ್ಕೆ ಕರೆಸಿ ಇಲ್ಲಿನ ಜನರ ಸಮಸ್ಯೆಗಳಿಗೆ ಏನು ಪರಿಹಾರ ಕಲ್ಪಿಸಿದ್ದೀರಿ? ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿ ಮಾಡಲು ಸಾಧ್ಯವಾಗಿದೆಯೇ? ತುರ್ತು ಚಿಕಿತ್ಸಾ ಸೇವೆಗಾಗಿ ಯಡಿಯೂರಪ್ಪ ಸರಕಾರದ ಅವಧಿಯಲ್ಲಿ ಒದಗಿಸಲಾದ 108 ಆಂಬುಲೆನ್ಸ್ ಸೇವೆಯ ವಿಚಾರದಲ್ಲಿ ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

. . . . . . .

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸಾವಿರಾರು ಕೋಟಿ ರೂಪಾಯಿಗಳ ಅನುದಾನ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಇಂತಹ ಭರವಸೆಗಳ ಕುರಿತು ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಹಳೆಯ ಮಾದರಿಯ ರಾಜಕೀಯ ಹೇಳಿಕೆಗಳನ್ನು ಒಪ್ಪಿಕೊಳ್ಳುವ ಕಾಲ ಇದಲ್ಲ. ದೇಶದ ಪ್ರಗತಿಗೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ ಇಂದಿನ ಸಮಾಜಕ್ಕೆ ಅಭಿವೃದ್ಧಿ ಕಾರ್ಯಗಳ ಸ್ಪಷ್ಟ ವಿವರ ಬೇಕಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಪ್ರತಿಯೊಂದು ವಿಚಾರದಲ್ಲೂ ಬಿಜೆಪಿಯ ಮೇಲೆ ಆರೋಪ ಮಾಡುವ ಬದಲು, ತಮ್ಮ ಸರಕಾರದ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವುದು ಸೂಕ್ತ. ಬಿಜೆಪಿ ಸರಕಾರದ ಅವಧಿಯಲ್ಲಿ ಕೈಗೊಂಡ ಕೆಲಸಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಸುಳ್ಳು ಆರೋಪಗಳು ಹಾಗೂ ಈಡೇರಿಸಲಾಗದ ಭರವಸೆಗಳನ್ನು ನೀಡುವುದನ್ನು ಮುಂದುವರಿಸಿದರೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಹೇಳಿರುವ ಅವರು, ಟಿ.ಎಂ. ಶಾಹಿದ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading