ಪಂಜ: ನವರಾತ್ರಿ ಉತ್ಸವ – ಅಲ್ಪೆ, ಚಿಂಗಾಣಿಗುಡ್ಡೆ ವಿಷ್ಣು ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿ ಅ.11 ರಿಂದ ನವರಾತ್ರಿ ಉತ್ಸವ ಆರಂಭಗೊಂಡಿದ್ದು ಅ.20 ತನಕ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು, ಬಳಿಕ ಭಕ್ತರಿಗೆ ಅನ್ನಸಂಪರ್ಪಣೆ ನಡೆಯಲಿದೆ.

. . . . . . . . .

ಅ.11 ರಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ನಾಗತೀರ್ಥ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಅ.12 ರಂದು ಶ್ರೀ ವಿಷ್ಣು ಭಜನಾ ಮಂಡಳಿ ಅಲ್ಪೆ, ಚಿಂಗಾಣಿಗುಡ್ಡೆ ಇವರಿಂದ ಭಜನಾ ಸಂಕೀರ್ತನೆ, ತಬಲ ಮತ್ತು ಕೀಬೋರ್ಡ್ ವಾದನ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading