ಅಡಿಕೆ ರೋಗಗಳ ಪತ್ತೆ ಮತ್ತು ವರ್ಗೀಕರಣ ಕುರಿತು ಸಂಶೋಧನೆ | ಪ್ರಮೋದ್ ಕುಮಾರ್ ಪಿ.ಎಂ. ಅವರಿಗೆ ಪಿಎಚ್.ಡಿ.

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಉಪನ್ಯಾಸಕ ಪ್ರಮೋದ್ ಕುಮಾರ್ ಪಿ.ಎಂ. ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ.

. . . . . . . . .

ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್) ವಿಭಾಗದ ಮುಖ್ಯಸ್ಥ ಡಾ. ರವಿಪ್ರಕಾಶ್ ಎಂ.ಎಲ್. ಅವರ ಮಾರ್ಗದರ್ಶನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸಲ್ಲಿಸಿದ ‘ಅರೆಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಅಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ ಲಭಿಸಿದೆ.

. . . . . . .

ಪ್ರಮೋದ್ ಕುಮಾರ್ ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಕಳೆದ 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿವೃತ್ತ ಮುಖ್ಯೋಪಾಧ್ಯಾಯ ಮೋನಪ್ಪ ಗೌಡ ಪಿ. ಮತ್ತು ದೇವಕಿ ಪಿ. ದಂಪತಿಯ ಪುತ್ರ. ಇವರ ಪತ್ನಿ ಹವ್ಯಶ್ರೀ ಪುರ ಅವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading