ಸುಳ್ಯದಲ್ಲಿ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸುದೀರ್ಘ ಯಶಸ್ವಿ ಆಡಳಿತ ಹಾಗೂ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಒಂದು ತಿಂಗಳ ಸೇವಾ ಚಟುವಟಿಕೆಗಳ ಭಾಗವಾಗಿ, 2047ರ ವಿಕಸಿತ ಭಾರತ ಸಂಕಲ್ಪದ ಉದ್ದೇಶದೊಂದಿಗೆ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

. . . . . . . . .

ಸೆ. 12ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಗುಂಡ್ಯದಲ್ಲಿ ಬೀದಿ ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪರಿಶ್ರಮದ ಮಹತ್ವವನ್ನು ತಿಳಿಸುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶಿಸಲಾಯಿತು. ಉದ್ಘಾಟನೆಯ ಬಳಿಕ ನಾಟಕದ ಮೊದಲ ಪ್ರದರ್ಶನವೂ ನಡೆಯಿತು.

. . . . . . .

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಮತ್ತು ಪ್ರಸನ್ನ ಮಾರ್ತ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ರೈ ಮನವಳಿಕೆ ಮತ್ತು ವಿನಯ್ ಕಂದಡ್ಕ, ವಿಕಾಸ್ ಪುತ್ತೂರು, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸೇರಿದಂತೆ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading