ವಿಜಯದಶಮಿ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

ಚಿನ್ನದ ಆಭರಣಗಳ ಮೇಕಿಂಗ್ ಚಾರ್ಜ್‌ನಲ್ಲಿ ₹600ರವರೆಗೆ ರಿಯಾಯಿತಿ, ವಜ್ರಾಭರಣ ಹಾಗೂ ಬೆಳ್ಳಿ ಆಭರಣಗಳ ಖರೀದಿಗೂ ವಿಶೇಷ ಆಫರ್

. . . . . . . . .

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಆಕರ್ಷಕ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.

. . . . . . .

ಈ ಕೊಡುಗೆಯಡಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್‌ನಲ್ಲಿ ಗರಿಷ್ಠ ₹600ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ವಜ್ರಾಭರಣಗಳ ಖರೀದಿಗೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ₹8,000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಖರೀದಿಗೆ ಪ್ರತಿ ಕೆ.ಜಿಗೆ ಫ್ಲಾಟ್ ₹8,000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲಿ ಒದಗಿಸುವುದರ ಜೊತೆಗೆ ಪ್ರತಿ ಕ್ಯಾರೆಟ್‌ಗೆ ₹8,000 ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸಲು ಬಯಸುವ ಗ್ರಾಹಕರಿಗೆ ಈ ಕೊಡುಗೆ ಉತ್ತಮ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆ ಅವಕಾಶ

ಗ್ರಾಹಕರು ಸಂಸ್ಥೆಯ ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವನ್ನೂ ಕಲ್ಪಿಸಲಾಗಿದೆ. ಯೋಜನೆಗೆ ಸೇರ್ಪಡೆಗೊಂಡು ನಿಗದಿತ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸಬಹುದಾಗಿದೆ. ಈ ಮೂಲಕ ಗ್ರಾಹಕರು ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಅನುಕೂಲ ಕಲ್ಪಿಸಲಾಗಿದೆ.

ಇದಲ್ಲದೆ, ಇತರೆ ಮಳಿಗೆಗಳಿಂದ ಖರೀದಿಸಿದ ಹಳೆಯ ಚಿನ್ನವನ್ನು ಶೂನ್ಯ ಶೇಕಡಾ ರೇಟ್ ಡಿಡಕ್ಷನ್‌ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನೂ ಸಂಸ್ಥೆ ನೀಡುತ್ತಿದೆ.

ವೈವಿಧ್ಯಮಯ ಆಭರಣಗಳ ಸಂಗ್ರಹ

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ. ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು, ಗ್ರಾಹಕರು ತಮ್ಮ ಅಭಿರುಚಿ ಹಾಗೂ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಕೊಡುಗೆಗಳು ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ, ಈ ಕೊಡುಗೆಗಳನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯೋಜನೆಗಳೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆರು ದಶಕಗಳ ವಿಶ್ವಾಸಾರ್ಹ ಸೇವೆ

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಮುನ್ನಡೆಯುತ್ತಿದೆ. ಗುಣಮಟ್ಟ, ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading