“ಅರಂತೋಡು ಮೆಸ್ಕಾಂ ನಲ್ಲಿ ಪವರ್‌ಮೆನ್ ಕೊರತೆ: ಸಮಸ್ಯೆ ಪರಿಹರಿಸದಿದ್ದರೆ ಮೆಸ್ಕಾಂ ಕಛೇರಿಗೆ ಮುತ್ತಿಗೆ” : ಜಿ.ಕೆ. ಹಮೀದ್ ಗೂನಡ್ಕ

“ಸುಳ್ಯ ಮೆಸ್ಕಾಂ ವ್ಯಾಪ್ತಿಯ ಅರಂತೋಡು ಶಾಖೆಯಲ್ಲಿ ಪವರ್‌ಮೆನ್‌ಗಳ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಅ.26ರೊಳಗೆ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಅ.27ರಂದು ಸುಳ್ಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು” ಎಂದು ಸಂಪಾಜೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರು ಹಾಗೂ ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಿ.ಕೆ. ಹಮೀದ್ ಗೂನಡ್ಕ ಎಚ್ಚರಿಕೆ ನೀಡಿದ್ದಾರೆ.

. . . . . . . . .

ಈ ಕುರಿತು ಮೆಸ್ಕಾಂ ಪುತ್ತೂರಿನ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಿರುವ ಅವರು, “ಅರಂತೋಡು ಮೆಸ್ಕಾಂ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪವರ್‌ಮೆನ್‌ಗಳು ಈಗಾಗಲೇ ವರ್ಗಾವಣೆಗೊಂಡಿದ್ದಾರೆ. ಆದರೆ, ಅವರ ಸ್ಥಾನಗಳಿಗೆ ಹೊಸದಾಗಿ ಯಾವುದೇ ಪವರ್‌ಮೆನ್‌ಗಳನ್ನು ನೇಮಕ ಮಾಡಿಲ್ಲ” ಎಂದು ತಿಳಿಸಿದ್ದಾರೆ.

. . . . . . .

“ಪವರ್‌ಮೆನ್‌ಗಳ ಕೊರತೆಯಿಂದ ಸಂಪಾಜೆ, ಗೂನಡ್ಕ, ಕಲ್ಲುಗುಂಡಿ, ಅರಂತೋಡು ಹಾಗೂ ಮರ್ಕಂಜ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಈ ಭಾಗದ ಜನರು ವಿದ್ಯುತ್ ಸಂಬಂಧಿತ ಸಮಸ್ಯೆಗಳಿಂದ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅ.26ರೊಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಅ.27ರಂದು ಸುಳ್ಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು” ಎಂದು ಜಿ.ಕೆ. ಹಮೀದ್ ಗೂನಡ್ಕ ಎಚ್ಚರಿಕೆ ನೀಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading