ಎಂ.ಆರ್.ಪಿ.ಎಲ್. ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ – ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಹತ್ವದ ನಿರ್ಧಾರ; 2,000ಕ್ಕೂ ಅಧಿಕ ಕಾರ್ಮಿಕರ ಕುಟುಂಬಗಳಿಗೆ ಪ್ರಯೋಜನ

ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷದ ಆರೋಗ್ಯ ವಿಮೆ ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಮಂಗಳೂರಿನ ಅವರ ಅಧಿಕೃತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

. . . . . . . . .

ಈ ಯೋಜನೆಯಿಂದ MRPLನಲ್ಲಿ ದುಡಿಯುತ್ತಿರುವ 2,000ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಕಾರ್ಮಿಕರ ಆರೋಗ್ಯ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವ ಪಡೆದಿದೆ.ಎಂಟು ವರ್ಷಗಳ ಬೇಡಿಕೆಗೆ ಸ್ಪಂದನೆMRPL ಗುತ್ತಿಗೆ ಕಾರ್ಮಿಕರಿಗೆ ಆರೋಗ್ಯ ವಿಮೆ ಒದಗಿಸಬೇಕೆಂಬ ಬೇಡಿಕೆ ಕಳೆದ ಎಂಟು ವರ್ಷಗಳಿಂದ ಕೇಳಿಬರುತ್ತಿತ್ತು. ಈ ಕುರಿತು ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು. ಆ ಸಂದರ್ಭದಲ್ಲಿ ಗುತ್ತಿಗೆ ಕಾರ್ಮಿಕರಿಗೆ ಆರೋಗ್ಯ ವಿಮೆ ಒದಗಿಸುವ ಅಗತ್ಯದ ಬಗ್ಗೆ ಚರ್ಚಿಸಲಾಗಿತ್ತು.

. . . . . . .

ಇದೀಗ ಸಂಸದರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ವಿಮೆ ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಕಾರ್ಮಿಕರ ಬಹುಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಪ್ರಗತಿ ಸಾಧಿಸಿದಂತಾಗಿದೆ.ಮಹಿಳಾ ಕಾರ್ಮಿಕರಿಗೆ ವಿಶೇಷ ಸೌಲಭ್ಯಆರೋಗ್ಯ ವಿಮೆಯ ಜೊತೆಗೆ MRPLನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುತ್ತಿಗೆ ಕಾರ್ಮಿಕರ ಸೌಲಭ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿ ಒದಗಿಸಲು ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಉತ್ತಮ ಕಾರ್ಯಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.

ಸಭೆಯಲ್ಲಿ ಗಣ್ಯರ ಉಪಸ್ಥಿತಿಸಭೆಯಲ್ಲಿ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರಾಜು, MRPLನ ಉನ್ನತಾಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಕಾರ್ಮಿಕರ ಸಮಸ್ಯೆಗಳು ಮತ್ತು ಅವರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

“ಕಾರ್ಮಿಕರ ರಕ್ಷಣೆ ನಮ್ಮ ಕರ್ತವ್ಯ” — ಕ್ಯಾ. ಬ್ರಿಜೇಶ್ ಚೌಟ : ಸಭೆಯ ಬಳಿಕ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಗುತ್ತಿಗೆ ಕಾರ್ಮಿಕರ ಸಮಸ್ಯೆ ಗಮನಕ್ಕೆ ಬಂದ ತಕ್ಷಣ ಅವರ ಪರವಾಗಿ ಕಾರ್ಯನಿರ್ವಹಿಸಲು ನಿರ್ಧರಿಸಿದ್ದಾಗಿ ತಿಳಿಸಿದರು.“ಇದೊಂದು ಐತಿಹಾಸಿಕ ಕ್ರಮ. MRPL ಗುತ್ತಿಗೆ ಕಾರ್ಮಿಕರ ಸಮಸ್ಯೆ ನನ್ನ ಗಮನಕ್ಕೆ ಬಂದ ತಕ್ಷಣ ಅವರ ಪರವಾಗಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಿ, ಇದೀಗ ಆರೋಗ್ಯ ವಿಮೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರ ರಕ್ಷಣೆ ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸಹಕಾರ ನೀಡಿದ MRPL ಸಂಸ್ಥೆಯ ಉನ್ನತಾಧಿಕಾರಿಗಳಿಗೆ, ಎಲ್ಲಾ ಅಧಿಕಾರಿಗಳಿಗೆ ಹಾಗೂ ಈ ಭಾಗದ ಜನಪ್ರತಿನಿಧಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ,” ಎಂದು ಹೇಳಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading