ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ 2026-27ರ ಉದ್ಘಾಟನೆ ಅ.17 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆಯಲ್ಲಿ ನಡೆಯಿತು. ಮಹಾತ್ಮ ಗಾಂಧಿ ದತ್ತು ಗ್ರಾಮ ಬಳ್ಪ ಇದರ ಆಡಳಿತ ಅಧಿಕಾರಿ ಶ್ರೀಕಾಂತ್ ಅವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಯಾದ ವ್ಯವಸ್ಥಾಪನಾ ಸಮಿತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಅವರು “ಎನ್ಎಸ್ಎಸ್ ಶಿಬಿರದಿಂದ ಕಲಿತ ನಾಯಕತ್ವ, ಶಿಸ್ತು ಜೀವನಕ್ಕೆ ಸಹಕಾರಿಯಾಗುತ್ತದೆ” ಎಂದು ಸ್ವಯಂ ಸೇವಕರಿಗೆ ತಿಳಿಸಿದರು.

. . . . . . . . .

ಉದ್ಘಾಟನಾ ಸಮಾರಂಭದಲ್ಲಿ ಕೆ.ಎಸ್.ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ರಂಗಯ್ಯ ಶೆಟ್ಟಿಗಾರ್, ಪ್ರಾಧ್ಯಾಪಕರಾದ ಡಾ. ತಿಲಕ ಎ.ಎ ಮತ್ತು ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಪಿ, ಕೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ ಪಿ ಟಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ, ವಿಶ್ವನಾಥ ರೈ ಸ್ಥಾಪಕ ಅಧ್ಯಕ್ಷರು ಸಿದ್ಧಿ ವಿನಾಯಕ ಭಜನಾ ಮಂಡಳಿ, ಬೀದಿಗುಡ್ಡೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯಂತ ಕುಮಾರ್, ಶಿಬಿರ ಉಸ್ತುವಾರಿ ಮಹೇಶ್ ಸುಂತಾರು, ಸಿದ್ಧಿವಿನಾಯಕ ಭಜನಾ ಮಂಡಳಿ ಬೀದಿಗುಡ್ಡೆ, ಇದರ ಅಧ್ಯಕ್ಷರಾದ ಗಣೇಶ್ ಕೊಠಾರಿ, ಶಿಬಿರಾಧಿಕಾರಿ ಶ್ರೀಮತಿ ಸುಮಿತ್ರಾ, ಎನ್ ಎಸ್ ಎಸ್ ಘಟಕದ ನಾಯಕರುಗಳಾದ ಅನುಷಾ, ಹರೀಶ್, ಕೀರ್ತನ್ ಉಪಸ್ಥಿತರಿದ್ದರು.

. . . . . . .

ಶಿಬಿರದ ಅಧಿಕಾರಿ ಶ್ರೀಮತಿ ಶ್ರೀಲತಾ ಕಮಿಲ ಸ್ವಾಗತಿಸಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೇದಾವತಿ ವಂದಿಸಿದರು. ಸ್ವಯಂ ಸೇವಕಿ ವರ್ಷಿಣಿ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading