ಕುಕ್ಕೆಯಲ್ಲಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ ; “ಕ್ರೀಡಾ ಚಟುವಟಿಕೆಗಳು ಉತ್ತಮ ಭವಿಷ್ಯಕ್ಕೆ ದಾರಿದೀಪ” : ಹರೀಶ್.ಎಸ್.ಇಂಜಾಡಿ ಅಭಿಮತ

ಸುಬ್ರಹ್ಮಣ್ಯ: “ಚಟುವಟಿಕೆಗಳು ಬದುಕನ್ನು ಅಭಿವೃದ್ಧಿಗೊಳಿಸಲು ಸಹಕಾರಿಯಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಳುಗಳಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಸರಕಾರವು ನೀಡುವ ಮೂಲಕ ಪ್ರೋತ್ಸಾಹ ಮಾಡುತ್ತಿದೆ. ಅನೇಕ ಕ್ರೀಡಾಳುಗಳಿಗೆ ಕ್ರೀಡೆಯ ಮೂಲಕ ಸರಕಾರಿ ಉದ್ಯೋಗ ದೊರಕಿರುವುದನ್ನು ನಾವು ಕಾಣುತ್ತೇವೆ. ಆದುದರಿಂದ ಕ್ರೀಡೆಯು ಜೀವನದ ಪ್ರಗತಿಗೆ ಕೂಡಾ ಮೈಲುಗಲ್ಲಾಗಿದೆ. ಕ್ರೀಡೆಗಳಿಗೆ ಮತ್ತು ಕ್ರೀಡಾಳುಗಳುಗಳಿಗೆ ನಿರಂತರ ಪ್ರೋತ್ಸಾಹ ನೀಡಬೇಕು. ಅದಕ್ಕೆ ಆವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯವಶ್ಯಕ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ದ.ಕ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಬಾಲಕ-ಬಾಲಕರ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.

. . . . . . . . .

ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ದ.ಕ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಚಿದ್ಗಲ್, ಕಾರ್ಯದರ್ಶಿ ನವೀನ್ ಹೆಗಡೆ, ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ಹಿರಿಯ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗುಣವರ್ಧನ ಕೆದಿಲ, ಸದಸ್ಯ ರಾಮಕೃಷ್ಣ ಹೊಳ್ಳಾರು ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಶ್ರುತಿ ಅಶ್ವಥ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕ್ರೀಡಾಂಗಣ ಉದ್ಘಾಟಿಸಲಾಯಿತು. ನಂತರ ಜಿಲ್ಲಾ ಮಟ್ಟದ ಪಂದ್ಯಾಟಗಳು ಆರಂಭವಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading