ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರದ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ. 26 ರಂದು ಅಮರ ಸಹಕಾರ ಸೌಧ, ಚೊಕ್ಕಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿ. ಕುಕ್ಕುಜಡ್ಕದಲ್ಲಿ ನಡೆಯಿತು.

. . . . . . . . .

 ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ನೆರವೇರಿಸಿದ AOLE (ರಿ). ಸುಳ್ಯ ಇದರ ಅಧ್ಯಕ್ಷರು ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿ ಎನ್ ಎಸ್ ಎಸ್ ವಿಧ್ಯಾರ್ಥಿಗಳಿಗೆ ಶುಭಹಾರೈಸುತ್ತಾ ಎನ್. ಎಸ್. ಎಸ್. ನ ಮೌಲ್ಯ ಹಾಗೂ ಮಹತ್ವವನ್ನು ತಿಳಿಸಿದರು.  

. . . . . . .

ಕಾಲೇಜಿನ ಪ್ರಾಂಶುಪಾಲರು ಡಾ. ಲೀಲಾಧರ್ ಡಿ ವಿ ಯವರು ಶಿಬಿರಾರ್ಥಿಗಳು ಶಿಸ್ತು ಪಾಲಿಸುತ್ತಾ ಒಂದು ವಾರ ಸೇವಾ ಮನೋಭಾವದಿಂದ ಶಿಬಿರವನ್ನು ಪೂರೈಸುವಂತೆ ಶುಭಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಾಯಿ ಸಮಿತಿ, ತಾಲೂಕು ಪಂಚಾಯತ್ ಸುಳ್ಯ ಇದರ ಮಾಜಿ ಅಧ್ಯಕ್ಷರು ಶ್ರೀ ರಾಧಾಕೃಷ್ಣ ಬೊಳ್ಳೂರು, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರು ಶ್ರೀ ಕೇಶವ ಗೌಡ ಕರ್ಮಾಜೆ, ನ್ಯಾಯವಾದಿಗಳು ಶ್ರೀ ಎನ್ ಜಯಪ್ರಕಾಶ್ ರೈ ಚೊಕ್ಕಾಡಿ ಹಾಗೂ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ ವಿನಯ್ ಶಂಕರ್ ಭಾರಧ್ವಾಜ್ ಬಿ, ಇವರುಗಳು ಶಿಬಿರಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ ಬಿ ಎಂ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ಎನ್ ಎಸ್ ಎಸ್ ಘಟಕದ ನಾಯಕರುಗಳಾದ ಶ್ರೀನಿವಾಸ್ ಪಿ ಜಿ ಹಾಗೂ ತ್ರಿಷಾ ಎಲ್ ಉಪಸ್ಥಿತರಿದ್ದರು. 

ಕಾರ್ಯಕ್ರಮವನ್ನು ಶಿಭಿರಾರ್ಥಿಗಳಾದ ಕು. ಮೇಧಾ ಮತ್ತು ತಂಡದವರು ಪ್ರಾರ್ಥಿಸಿ, ಶ್ರೀನಿವಾಸ್ ಸ್ವಾಗತಿಸಿ, ಕು. ವಿದ್ಯಶ್ರೀ ಹಾಗೂ ಕು . ಧನ್ಯಶ್ರೀ ಇವರು ನಿರೂಪಿಸಿ ಕು. ತನುಷಾ ವಂದಿಸಿದರು. 

ಶಿಬಿರವು 26-10-2026 ರಿಂದ 01-11-2026ರ ತನಕ ಜರುಗಲಿರುವುದು. ಈ ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ, ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುವುದು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading