ಅಥ್ಲೆಟಿಕ್ಸ್‌ನಲ್ಲಿ ಸಾಧನೆ : ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಕುಮಾರಸ್ವಾಮಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿಗಳ ಆಯ್ಕೆ

ಸುಬ್ರಹ್ಮಣ್ಯ : ರಾಮಕುಂಜದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು, ಸುಬ್ರಹ್ಮಣ್ಯದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

. . . . . . . . .

ಕಾಲೇಜಿನ ವಿದ್ಯಾರ್ಥಿನಿ ನಂದಿತಾ ಕೆ.ವಿ. ಅವರು ಚಕ್ರ ಎಸೆತ (Discus Throw), ಜಸ್ವಿನ್ ಎಲ್. ಅವರು ನಡಿಗೆ ಸ್ಪರ್ಧೆ (Walk Race) ಹಾಗೂ ಭಗತ್ ಟಿ. ಅವರು ಈಟಿ ಎಸೆತ (Javelin Throw) ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

. . . . . . .

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿವೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕಿ ಕುಮಾರಿ ಪ್ರಜ್ಞಾ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading