ಅಕ್ರಮ ಮದ್ಯ ಮಾರಾಟ ಪ್ರಕರಣ : ಆರೋಪಿ ದೋಷಮುಕ್ತ

ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

. . . . . . . . .

2024ರ ನವೆಂಬರ್ 23ರಂದು ಆರೋಪಿ ದಿನೇಶ್ ಎಂಬಾತನು ಕಾನೂನುಬಾಹಿರವಾಗಿ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶದಿಂದ ವೈನ್ ಶಾಪ್‌ನಿಂದ ಮದ್ಯ ಖರೀದಿಸಿ ಅರಂತೋಡು ಗ್ರಾಮದ ಅರಂತೋಡು ಪೇಟೆಯಿಂದ ಅಡ್ಕಬಳೆಗೆ ಹೋಗುವ ರಸ್ತೆ ಬದಿಯಲ್ಲಿರುವ ಚಿಕನ್ ಸೆಂಟರ್‌ನಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಅಂದಿನ ಪೊಲೀಸ್ ಉಪನಿರೀಕ್ಷಕರಾದ ಸರಸ್ವತಿ ಬಿ.ಟಿ. ಅವರು ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

. . . . . . .

ಪ್ರಕರಣದ ತನಿಖೆ ನಡೆಸಿದ ಸುಳ್ಯ ಪೊಲೀಸರು ಆರೋಪಿಯ ವಿರುದ್ಧ ಸುಳ್ಯ ಹಿರಿಯ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ಹಿರಿಯ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ತಟ್ಟಂಡ ದಮಯಂತಿ ಸೋಮಯ್ಯ ಅವರು, ಆರೋಪಿಯ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂಬ ಕಾರಣಕ್ಕೆ 2026ರ ಅಕ್ಟೋಬರ್ 28ರಂದು ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಆರೋಪಿಯ ಪರವಾಗಿ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಎನ್.ಕೆ. ಹಾಗೂ ವಿಮಲೇಶ್ ಗೌಡ ಅವರು ವಾದಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading