ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ ಮತ್ತು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ಇದರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಅ.29 ರಂದು ನಡೆಯಿತು. ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಶ್ರೀಮತಿ ತಟ್ಟಂಡ ದಮಯಂತಿ ಸೋಮಯ್ಯ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಅಪರಾಧ ಕುರಿತು ಜಾಗೃತಿ ಮತ್ತು ಮಾಹಿತಿ ನೀಡಿದರು.

. . . . . . . . .

ಅತಿಥಿಗಳಾಗಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಶ್ರೀಹರಿ ಕುಕ್ಕಡೇಲು ಭಾಗವಹಿಸಿ, ಮಾತನಾಡಿರು.ಸಂಪನ್ಮೂಲ ವ್ಯಕ್ತಿಯಾಗಿ ಪ್ರತಿಭಾ ಜ್ಯೋತಿ ಪಿ.ವಿ ಭಾಗವಹಿಸಿ, ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ರಾಜ್ಯ ಅರೆಭಾಷೆ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ವಹಿಸಿದರು.

. . . . . . .

ಮುಖ್ಯ ಶಿಕ್ಷಕಿ ಜಯಲತಾ ಕೆ. ಆರ್ ಸ್ವಾಗತಿಸಿದರು. ಶಿಕ್ಷಕ ಶಿವಪ್ರಕಾಶ್ ಕೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮೀನಕುಮಾರಿ ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಪರಿಜಾಗೃತಿ ಮೂಡಿಸುವ ದೃಷ್ಟಿಯಿಂದ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ತಟ್ಟಂಡ ದಮಯಂತಿ ಸೋಮಯ್ಯ ವಿದ್ಯಾರ್ಥಿಗಳಿಗೆ ವಿವಿಧ ತಳಿಯ ಗಿಡಗಳನ್ನು ವಿತರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading