ಸುಬ್ರಹ್ಮಣ್ಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಬುಡಕಟ್ಟು ಜನಾಂಗದ ವಸತಿ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ ಕೂಜುಗೋಡು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡು ತೋಟ ಮಾತನಾಡಿ “ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಾದ ಮದ್ರಾಸ್ ಪ್ರಾಂತ್ಯ, ಮುಂಬೈ ಪ್ರಾಂತ್ಯ,ನಿಜಾಮರ ಆಳ್ವಿಕೆಯಲ್ಲಿದ್ದ ಹೈದರಾಬಾದ್ ಪ್ರಾಂತ್ಯ, ಕೊಡಗು ಹಾಗು ಮೈಸೂರು ಸಂಸ್ಥಾನ ಹಂಚಿಹೋಗಿದ್ದವು. ಚದುರಿ ಹೋಗಿದ್ದ ಎಲ್ಲ ಕನ್ನಡಿಗರನ್ನು ಮತ್ತು ಕನ್ನಡ ಭಾಷಾ ಪ್ರದೇಶಗಳನ್ನು ಒಂದೇ ಸೂರಿನಡಿ ತಂದು ಭಾಷೆಯ ಭಾಂದವ್ಯವನ್ನು ಗಟ್ಟಿಗೊಳಿಸುವುದು ಇದರ ಉದ್ದೇಶವಾಗಿದೆ. ಅಲ್ಲದೇ ಕರ್ನಾಟಕದ ಶ್ರೀಮಂತಿಕೆಯ ಇತಿಹಾಸ, ಜಾನಪದ ಕಲೆ, ಸಾಹಿತ್ಯ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಮತ್ತು ಉಳಿಸಿ ಬೆಳೆಸುವುದು ಅಗತ್ಯವಾಗಿದೆ” ಎಂದರು.

. . . . . . .

ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಪ್ರೊ. ರಂಗಯ್ಯ ಶೆಟ್ಟಿಗಾರ್ ಮಾತನಾಡಿ “1956 ನವೆಂಬರ್ ಒಂದರಂದು ರಾಜ್ಯ ಪುನರ್ವಿಂಗಡನೆಯ ಕಾಯ್ದೆಯನ್ವಯ ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳನ್ನ ಸೇರಿಸಿ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂತು ತದನಂತರ 1973 ನವೆಂಬರ್ 1 ರಂದು ಆಗಿನ ಮುಖ್ಯಮಂತ್ರಿ ದೇವರಾಜ್ ಅರಸು ಅವರು ಮೈಸೂರು ರಾಜ್ಯಕ್ಕೆ ಅಧಿಕೃತವಾಗಿ ಕರ್ನಾಟಕ ಎಂದು ನಾಮಕರಣ ಮಾಡಿರುವರು. ಕನ್ನಡ ರಾಜ್ಯೋತ್ಸವವು ನವಂಬರ್ 1ಕ್ಕೆ ಸೀಮಿತವಾಗಿರದೆ ಕನ್ನಡ ಭಾಷೆಯನ್ನು ದಿನನಿತ್ಯ ನಮ್ಮ ಬದುಕಿನಲ್ಲಿ ಬಳಸುವುದು, ಪುಸ್ತಕ ಓದುವುದು, ಭಾಷೆಯ ಉಳಿವಿಗಾಗಿ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ” ಎಂದರು.

ವೇದಿಕೆಯಲ್ಲಿ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯಸ್ಥರಾದ ಬಸವರಾಜ್, ಲಯನ್ಸ್ ನಿಕಟ ಪೂರ್ವ ಅಧ್ಯಕ್ಷ ವಿಮಲಾ ರಂಗಯ್ಯ, ಪೊಲೀಸ್ ಅಧಿಕಾರಿ ಸಂಧ್ಯಾ, ಲಯನ್ಸ್ ಕ್ಲಬ್ ಖಜಾಂಜಿ ಪವನ್ ಎಂ ಡಿ, ಕಾರ್ಯದರ್ಶಿ ವಿಷ್ಣು ಪಾತಿಕಲ್ ಉಪಸ್ಥಿತರಿದ್ದರು. ವಾಲ್ಮೀಕಿ ಶಾಲಾ ಮುಖ್ಯ ಶಿಕ್ಷಕಿ ಮಲ್ಲಿಕಾ ಹಾಗೂ ಸಹ ಶಿಕ್ಷಕಿಯರು ಸಹಕರಿಸಿದರು. ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಕೃಷ್ಣಕುಮಾರ್ ಬಾಳುಗೋಡು, ಗಾಯತ್ರಿ ಕೃಷ್ಣ ಕುಮಾರ್, ಲೋಕೇಶ್ ಬಿ ಎನ್ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading