ಎಂ.ಜಿ.ಎಂ. ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದಕೊಡಿಯಾಲಬೈಲು ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ಇಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ, ಹಿರಿಯ ಶಿಕ್ಷಕಿ ಶ್ರೀಮತಿ ಚಿತ್ರಲೇಖ, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕನ್ನಡ ಮಾತೆಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.

. . . . . . .

ಈ ಸಂದರ್ಭದಲ್ಲಿ ಸಂಸ್ಥೆಯ ಕನ್ನಡ ಶಿಕ್ಷಕಿ ಶ್ರೀಮತಿ ವೀಣಾ ಅವರು ಕನ್ನಡ ರಾಜ್ಯೋತ್ಸವದ ಮಹತ್ವ, ಕರ್ನಾಟಕದ ಏಕೀಕರಣ, ಕನ್ನಡ ಭಾಷೆಯ ಇತಿಹಾಸ ಹಾಗೂ ಕನ್ನಡ ನಾಡು-ನುಡಿಯ ಹಿರಿಮೆಯ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾಗಿ ತಿಳಿಸಿದರು. ಕನ್ನಡ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅದರ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading