ಸುಳ್ಯ : ಶಾಂತಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಇಲ್ಲಿ 71ನೆಯ ಕನ್ನಡ ರಾಜ್ಯೋತ್ಸವವನ್ನು ನ.01 ರಂದು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದಲ್ಲಿ ಶಾಲಾ ಪ್ರಾರ್ಥನಾ ಅವಧಿಯ ಚಟುವಟಿಕೆಯ ನಂತರ ಸಭಾ ಕಾರ್ಯಕ್ರಮವನ್ನು ಮಾಡಲಾಯಿತು. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಪೂರ್ಣಿಮಾ ಎಂ ಆರ್ ಅವರು ಕನ್ನಡ ರಾಜ್ಯೋತ್ಸವದ ಮಹತ್ವ, ಕರ್ನಾಟಕದ ಏಕೀಕರಣ, ಕನ್ನಡ ಭಾಷೆಯ ಇತಿಹಾಸ ಹಾಗೂ ಕನ್ನಡ ನಾಡು ನುಡಿಯ ಹಿರಿಮೆಯ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾಗಿ ತಿಳಿಸಿದರು. ಕನ್ನಡ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅದರ ಉಳಿವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ತಿಳಿಸಿದರು.

. . . . . . .

ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ, ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. ಶಿಕ್ಷಕರು ಕನ್ನಡ ನಾಡು ನುಡಿಯ ಮೇರುಗನ್ನು ಹೆಚ್ಚಿಸುವ ಕನ್ನಡ ಗೀತೆಯನ್ನು ಹಾಡಿದರು.

ಸಭಾಧ್ಯಕ್ಷರಾದ ಎಸ್ ಡಿ ಎಂ ಸಿ ಅಧ್ಯಕ್ಷರು ಮಹಮ್ಮದ್ ನಝೀರ್ ಅವರು ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಭಾಷೆಯನ್ನು ಮಾತನಾಡಬೇಕು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರವಾದದ್ದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಹಮ್ಮದ್ ನಝೀರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading