ಆರಂತೋಡಿನಲ್ಲಿ “ಅರೆಭಾಷೆ ಸಾಹಿತ್ಯ ಸಂಭ್ರಮ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿ “ಅರೆಭಾಷೆ ಸಾಹಿತ್ಯ ಸಂಭ್ರಮ” ಕಾರ್ಯಕ್ರಮವು ನವಂಬರ್ 3ರಂದು ನಡೆಯಿತು.

. . . . . . . . .

ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದ ಸಂಚಾಲಕರಾದ ವಸಂತ್ ಎಸಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅರೆಭಾಷೆಯು ನಮ್ಮ ಈ ಭಾಗದ ಅಸ್ಮಿತೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು ಎಂದು ಕರೆಯಿತ್ತರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೆರಾಲು ಇವರು ‘ಅರೆಭಾಷೆಯಲ್ಲಿ ಸಾಹಿತ್ಯ ರಚನೆ ಸಾಧ್ಯತೆ’ ಎಂಬ ವಿಚಾರದ ಬಗ್ಗೆ ಉಪನ್ಯಾಸ ನೀಡಿದರು.

. . . . . . .

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ರಮೇಶ, ಮುಖ್ಯ ಶಿಕ್ಷಕರಾದ ಸೋಮಶೇಖರ್, ಪಾಪ್ಯುಲರ್ ಎಜುಕೇಶನ್ ಸೊಸೈಟಿ ಅರಂತೋಡು ಇದರ ಕಾರ್ಯದರ್ಶಿಗಳಾದ ಎ ಅಬ್ದುಲ್ಲ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು

ಸಭೆಯಲ್ಲಿ ದ.ಕ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಕಿಶೋರ್ ಕುಮಾರ್ ಕಿರ್ಲಾಯ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಭಾವನಾ ಸುಗಮ ಸಂಗೀತ ಬಳಗದ ಶ್ರೀ ಕೆ ಆರ್ ಗೋಪಾಲಕೃಷ್ಣ ಇವರು ಅರೆ ಭಾಷೆ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ವೇದಿಕೆಯಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಚಂದ್ರಮತಿ ಕೆ ಮತ್ತು ತೇಜಸ್ವಿ ಕಡಪಳ, ಜಿಲ್ಲಾ ಪ್ರತಿನಿಧಿ ಶ್ರೀರಾಮಚಂದ್ರ ಪಲ್ಲತಡ್ಕ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕರಾದ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಂಶುಪಾಲರಾದ ರಮೇಶ್ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading