ಸುಳ್ಯ ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿ ಕಾಡು ಬೆಳೆದು ಅವ್ಯವಸ್ಥೆ – ತಿರುವುಗಳಲ್ಲಿ ರಸ್ತೆ ಕಾಣದೆ ವಾಹನ ಸವಾರರಿಗೆ ಅಪಾಯ

ಸುಳ್ಯ–ಗುತ್ತಿಗಾರು–ಸುಬ್ರಹ್ಮಣ್ಯ ರಸ್ತೆಯ ಇಕ್ಕೆಲಗಳಲ್ಲಿ ಕಳೆಗಿಡಗಳು ಹಾಗೂ ಪೊದೆಗಳು ಬೆಳೆದು ನಿಂತಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ರಸ್ತೆಯ ತಿರುವುಗಳಲ್ಲಿ ಕಾಡು ಬೆಳೆದು ರಸ್ತೆ ಸರಿಯಾಗಿ ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಎದುರಿನಿಂದ ಬರುವ ವಾಹನಗಳು ಗೋಚರಿಸದೆ ಅಪಘಾತ ಸಂಭವಿಸುವ ಅಪಾಯ ಎದುರಾಗಿದೆ.

. . . . . . . . .

ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಬದಿಯ ಕಳೆಗಿಡಗಳು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ಗಮನಹರಿಸಿ, ಆದಷ್ಟು ಶೀಘ್ರ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಕಳೆಗಿಡಗಳು ಹಾಗೂ ಪೊದೆಗಳನ್ನು ತೆರವುಗೊಳಿಸಬೇಕು. ಅಪಘಾತ ಸಂಭವಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಂಡು ವಾಹನ ಸವಾರರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading