ಗುತ್ತಿಗಾರು : ನ.08 ರಂದು “ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಶಿಬಿರ”

ಲೋಕೇಶ್ ಪೀರನಮನೆ ರವರ ಆಯೋಜಕತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದೊಂದಿಗೆ ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 08 ಭಾನುವಾರದಂದು ಗುತ್ತಿಗಾರಿನ ಗ್ರಾಮ ಪಂಚಾಯತ್(ಪ.ವ) ಸಭಾಭವನದಲ್ಲಿ “ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಹೊಸ ಆಧಾರ್ ನೋಂದಾವಣೆ ಹಾಗೂ ಈಗಾಗಲೇ ಹೊಂದಿರುವ ಆಧಾರ್ ಕಾರ್ಡ್ ನಲ್ಲಿನ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶವಿದ್ದು, ಶಿಬಿರದಲ್ಲಿ ಸೇವೆ ಪಡೆಯಲು ಇಚ್ಚಿಸುವವರು ಮುಂಚಿತವಾಗಿ ಕೂಪನ್ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಮುಂಚಿತವಾಗಿ ಕೂಪನ್ ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಬಿರದ ಆಯೋಜಕರಾದ ಲೋಕೇಶ್ ಪೀರನಮನೆ 9449456666 ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading