ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ
ಶಿಕ್ಷಕರ ದಿನಾಚರಣೆಯು ಸುಳ್ಯದ ರಥಬೀದಿಯಲ್ಲಿರುವ ರೋಟರಿ ಶಾಲೆಯಲ್ಲಿ ಸೆ.5 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹಾದೇವ್, ರೋಟರಿ ಶಾಲೆಯ ಸಂಚಾಲಕ ಜಿತೇಂದ್ರ ನಿಡ್ಯಮಲೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಕ.ರಾ.ಸ ನೌಕರರ ಸಂಘದ ಸುಳ್ಯ ಘಟಕದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಕ.ರಾ ಪ್ರೌಢಶಾಲೆ ಶಿಕ್ಷಕರ ಸಂಘದ ಮೋನಪ್ಪ ಗೌಡ, ದೈಹಿಕ ಶಿಕ್ಷಕರ ಸಂಘದ ಸೂಫಿ ಪೆರಾಜೆ, ಮುಖ್ಯೋಪಾಧ್ಯಾಯ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಶೇ.೧೦೦ ಫಲಿತಾಂಶ ಪಡೆದ ಸರಕಾರಿ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರಿಗೆ, ಸ್ಕೌಟ್ ಹಾಗೂ ಗೈಡ್ಸ್‌ಗಳಲ್ಲಿ ಸಾಧನೆ ಮಾಡಿದವರಿಗೆ, ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪಡೆದವರಿಗೆ ಹಾಗೂ ಹತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನುಷ್ ಹಾಗೂ ಆದಿತ್ಯರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಪೂರ್ಣಿಮಾ ಹಾಗೂ ತಂಡದವರಿಂದ ರೈತಗೀತೆ ಹಾಗೂ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಲಕ್ಷ್ಮೀಶ ರೈ ವಂದಿಸಿ, ಅಚ್ಚುತ ಅಟ್ಲೂರು ಹಾಗೂ ವಸಂತ ಏನೆಕಲ್ಲು ಕಾರ್ಯಕ್ರಮ ನಿರ್ವಹಿಸಿದರು.
- Thursday
- November 21st, 2024