ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ್ಞಾನ ದೀಪೋತ್ಸವ – 2026 ; ನಾಳೆ ಗೂಡು ದೀಪ ಸ್ಪರ್ಧೆ, ನವೆಂಬರ್ 22ರಂದು ಉಚಿತ ದಂತ ಚಿಕಿತ್ಸಾ ಶಿಬಿರ

ಕುಕ್ಕೆ ಸುಬ್ರಹ್ಮಣ್ಯ: ಸಾಂಸ್ಕೃತಿಕ ಪರಂಪರೆಯ ಉಳಿವಿನ ಜೊತೆಗೆ ಆರೋಗ್ಯ ಜಾಗೃತಿಗೂ ಆದ್ಯತೆ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ್ಞಾನ ದೀಪೋತ್ಸವ – 2026 ಆಯೋಜಿಸಲಾಗಿದೆ.

. . . . . . . . .

ಶ್ರೀ ಜ್ಞಾನ ದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್ (ರಿ.), ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಜ್ಞಾನ ದೀಪೋತ್ಸವದ ಅಂಗವಾಗಿ ನಾಳೆ ಗೂಡು ದೀಪ ಸ್ಪರ್ಧೆ ಹಾಗೂ ನವೆಂಬರ್ 22ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.

. . . . . . .

ನವೆಂಬರ್ 8ರ ಭಾನುವಾರ ಸಂಜೆ 6 ಗಂಟೆಯಿಂದ 8 ಗಂಟೆಯವರೆಗೆ ಸುಬ್ರಹ್ಮಣ್ಯದ ಶ್ರೀ ವನದುರ್ಗ ದೇವಸ್ಥಾನದ ಸಭಾಭವನದಲ್ಲಿ ಗೂಡು ದೀಪ ಸ್ಪರ್ಧೆ ನಡೆಯಲಿದೆ.

ಎಸ್‌ಎಸ್‌ಪಿಯು ಪ್ರೌಢಶಾಲೆಯ ನಿವೃತ್ತ ವಿಜ್ಞಾನ ಶಿಕ್ಷಕರಾದ ಕೆ. ಯಶವಂತ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಬ್ರಹ್ಮಣ್ಯದ ಅರಣ್ಯ ಅಧಿಕಾರಿ ಚೇತನ್ ಎಚ್.ಪಿ. ಹಾಗೂ ವನ್ಯಜೀವಿ ಸಂರಕ್ಷಕರಾದ ಶ್ರೀ ಭುವನೇಶ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಗೌರಿತಾ ರಚಿಸಿರುವ ಮಕ್ಕಳ ಕಥಾ ಪುಸ್ತಕ ‘ಪುಟ್ಟ ಕಥಾ ಪ್ರಪಂಚ’ ಬಿಡುಗಡೆಯಾಗಲಿದೆ.ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ನಗದು ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ 5 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 3 ಸಾವಿರ ರೂಪಾಯಿ ಹಾಗೂ ತೃತೀಯ ಬಹುಮಾನವಾಗಿ ಒಂದು ಸಾವಿರ ರೂಪಾಯಿ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಗುವುದು.

ಇನ್ನು ಜ್ಞಾನ ದೀಪೋತ್ಸವದ ಮತ್ತೊಂದು ಪ್ರಮುಖ ಕಾರ್ಯಕ್ರಮವಾಗಿ ನವೆಂಬರ್ 22ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಸುಬ್ರಹ್ಮಣ್ಯದ ಶ್ರೀ ವನದುರ್ಗ ಸಭಾಭವನದಲ್ಲಿ KVG ದಂತ ವೈದ್ಯಕೀಯ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಶ್ರೀ ಸುಧರ್ಶನ್ ಜೋಯಿಸ್ ಹಾಗೂ ಸುಬ್ರಹ್ಮಣ್ಯ ಮಠದ ಶ್ರೀ ಸಂಪತ್ ನರಸಿಂಹ ಸ್ವಾಮಿ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಡಾ. ಶಿವಕುಮಾರ್ ಹೊಸೋಳಿಕೆ, ಅನುಗ್ರಹ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಗಣೇಶ್ ನಾಯರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಸಮಾಜ ಸೇವಕರಾದ ರವಿ ಕಕ್ಕೆಪದವು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲು ಸ್ವಚ್ಛಗೊಳಿಸುವಿಕೆ, ಹಲ್ಲು ತುಂಬಿಸುವಿಕೆ ಹಾಗೂ ಅಗತ್ಯವಿರುವವರಿಗೆ ಹಲ್ಲು ತೆಗೆಯುವ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.ಸಾಂಸ್ಕೃತಿಕ ಪರಂಪರೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ಸಾರ್ವಜನಿಕರ ಆರೋಗ್ಯದ ಕಾಳಜಿಯನ್ನೂ ಹೊಂದಿರುವ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಮಕ್ಕಳು ಹಾಗೂ ಸ್ಪರ್ಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಜ್ಞಾನ ದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್ ಮನವಿ ಮಾಡಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading