ಬಾಳುಗೋಡು : ಮರದಲ್ಲಿ ಕಾಣಿಸಿಕೊಂಡ ಬೆಂಕಿ ; ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ನ.10 ರಂದು ರಾತ್ರಿ ಸುಮಾರು 9:30ರ ಸುಮಾರಿಗೆ ಮರದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಾಳುಗೋಡು ಗ್ರಾಮದ ಕಿರಿಭಾಗ ಎಂಬಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು ಶ್ರಮಪಟ್ಟಿದ್ದು, ಬೆಂಕಿಯ ತೀವ್ರತೆ ಹೆಚ್ಚಾದ ಕಾರಣ ಸುಳ್ಯದ ಅಗ್ನಿಶಾಮಕ ದಳದ ಕಛೇರಿಗೆ ವಿಷಯ ತಿಳಿಸಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದು, ಬೆಂಕಿ ಹತ್ತಲು ಕಾರಣವೇನೆಂದು ತಿಳಿದುಬಂದಿಲ್ಲ. ಈ ಕುರಿತು ಮಾತನಾಡಿದ ಸ್ಥಳೀಯರು “ಬಾಳುಗೋಡು-ಕಿರಿಭಾಗ-ಹರಿಹರ ಸಂಪರ್ಕಿಸುವ ಸಾರ್ವಜನಿಕ ರಸ್ತೆ ಬದಿಯಲ್ಲಿರುವ ಮರ ಇದಾಗಿದ್ದು, ಸದ್ರಿ ಈ ಮರ ಬೀಳುವ ಸ್ಥಿತಿಯಲ್ಲಿದ್ದು, ಇದನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದ್ದು, ಈವರೆಗೆ ತೆರವು ಕಾರ್ಯ ನಡೆದಿಲ್ಲ” ಎಂದು ಹೇಳುತ್ತಿದ್ದಾರೆ. ಇದೀಗ ಬೆಂಕಿ ಹತ್ತಿದ ಕಾರಣ ಈ ಮರ ಮತ್ತಷ್ಟು ಶಿಥಿಲಗೊಂಡಿರುತ್ತದೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading