ನವೆಂಬರ್ 22: ಸುಳ್ಯದ ಕೇರ್ಪಳದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ‘ರಜತ ಸಂಭ್ರಮ-2026’

ಸುಳ್ಯ: 2001ರಲ್ಲಿ ಪುತ್ತೂರಿನಲ್ಲಿ ಆರಂಭಗೊಂಡು 25 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿರುವ ರಾಜ್ಯದ ಪ್ರತಿಷ್ಠಿತ ‘ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ’ ಇದರ ರಜತ ಮಹೋತ್ಸವದ ಅಂಗವಾಗಿ ‘ಸುಳ್ಯದಲ್ಲಿ ರಜತ ಸಂಭ್ರಮ–2026’ ಕಾರ್ಯಕ್ರಮವನ್ನು ನವೆಂಬರ್ 22ರ ಭಾನುವಾರದಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ರಾಜ್ಯವ್ಯಾಪಿ 23 ಶಾಖೆಗಳೊಂದಿಗೆ ₹900 ಕೋಟಿಗೂ ಮಿಕ್ಕಿ ವಹಿವಾಟು ನಡೆಸುತ್ತಿರುವ ಸಂಸ್ಥೆಯು, ಸುಳ್ಯ, ಬೆಳ್ಳಾರೆ ಹಾಗೂ ಕಡಬ ಶಾಖೆಗಳನ್ನು ಕೇಂದ್ರೀಕರಿಸಿ ಈ ಸಂಭ್ರಮಾಚರಣೆಯನ್ನು ಆಯೋಜಿಸಿದೆ.

. . . . . . . . .

ಉದ್ಘಾಟನೆ – ಸಭಾ ಕಾರ್ಯಕ್ರಮ
ಪೂರ್ವಾಹ್ನ 11:30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಹಾಗೂ ಮಂಗಳೂರಿನ ದಿ ಕ್ಯಾಂಪ್ಕೋ ಲಿಮಿಟೆಡ್‌ನ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ವಹಿಸಲಿದ್ದಾರೆ. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕ್ಯಾಂಪ್ಕೋ ಮಾಜಿ ನಿರ್ದೇಶಕ ರಾಧಾಕೃಷ್ಣ ಕೋಟೆ, ಕರ್ನಾಟಕ ಪ್ಲೈವುಡ್ ಇಂಡಸ್ಟ್ರೀಸ್ ಮಾಲಕ ಕೃಷ್ಣ ಕಾಮತ್, ಮಂಗಳೂರು ಎ.ಜೆ. ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ರಾಘವೇಂದ್ರ ಪ್ರಸಾದ್ ಕೆ.ವಿ. ಹಾಗೂ ಸುಳ್ಯ ಭಾಳಾವಳೀಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಕೀಲರು ಹಾಗೂ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎನ್. ಜಯಪ್ರಕಾಶ್ ರೈ, ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಹೊಸವಳಿಕೆ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ದಾಮ್ಲೆ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸ್ಥಳೀಯ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು.

. . . . . . .

ಸಾಂಸ್ಕೃತಿಕ ಹಾಗೂ ಹಾಸ್ಯ ನಾಟಕ ವೈಭವ
ಪೂರ್ವಾಹ್ನ 9:00 ರಿಂದ 11:30 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು. ಪೂರ್ವಾಹ್ನ 11:30 ರಿಂದ 1:00 ಸಭಾ ಕಾರ್ಯಕ್ರಮ. ಅಪರಾಹ್ನ 2:30 ರಿಂದ 5:00 ‘ಬಲೆ ತೆಲಿಪಾಲೆ’ ಖ್ಯಾತಿಯ ಪ್ರಶಂಸ ಕಾಪು ತಂಡದ ಪ್ರಸನ್ನ ಶೆಟ್ಟಿ ಬೈಲೂರು ನಿರ್ದೇಶನದ ‘ಚೈತನ್ಯ ಕಲಾವಿದರು ಬೈಲೂರು’ ತಂಡದಿಂದ ಹಾಸ್ಯಮಯ ತುಳು ನಾಟಕ ‘ರಾಘು ಮಾಷ್ಟ್ರು’ ಪ್ರದರ್ಶನಗೊಳ್ಳಲಿದೆ. ರಜತ ಮಹೋತ್ಸವದ ಪ್ರಯುಕ್ತ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ನಾಯಕ್ ಎ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading