ನೆಲ್ಯಾಡಿ ಗ್ರಾಮದ ಸರ್ವೆ ನಂ. 186ರ ಜಂಟಿ ಸರ್ವೆ ನಡೆಸಲು ಸಚಿವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂ. 186ರ ಜಂಟಿ ಸರ್ವೆ ನಡೆಸಲು ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ರವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ.

. . . . . . . . .

ಸಚಿವರನ್ನು ಭೇಟಿ ಮಾಡಿದ ಶಾಸಕರು, ನೆಲ್ಯಾಡಿ ಗ್ರಾಮದ ಸರ್ವೆ ನಂಬರ್ 186ರ ಜಂಟಿ ಸರ್ವೆ ಇದುವರೆಗೂ ನಡೆಯದಿರುವುದರಿಂದ ಈ ವ್ಯಾಪ್ತಿಯ ಸಾರ್ವಜನಿಕರಿಗೆ ನಿವೇಶನ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ಹಾಗೂ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

. . . . . . .

ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತಾಗಿ ಜಂಟಿ ಸರ್ವೆ ನಡೆಸಿ, ಸರ್ಕಾರಿ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಜಾಗಗಳ ಗಡಿಗಳನ್ನು ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸ್ಥಳೀಯ ಸಾರ್ವಜನಿಕರ ಬಹುಕಾಲದ ಜಂಟಿ ಸರ್ವೆ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಚಿವರಲ್ಲಿ ಮನವಿ ಮಾಡಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading