ಸುಣ್ಣಮೂಲೆಯಲ್ಲಿ ನ.17ರಂದು ನೂತನ ಮದ್ರಸ ಕಟ್ಟಡ ಉದ್ಘಾಟನೆ ; ಸಯ್ಯದುಲ್ ಉಲಮಾ ಅಸ್ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅವರಿಂದ ಉದ್ಘಾಟನೆ

ಕನಕಮಜಲು : ಇಲ್ಲಿನ ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿ ಮತ್ತು ನೂರುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನವೆಂಬರ್ 17ರಂದು ನಡೆಯಲಿದೆ.

. . . . . . . . .

ನೂತನ ಮದ್ರಸ ಕಟ್ಟಡವನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷರು ಹಾಗೂ ಸಂಯುಕ್ತ ಖಾಝಿಗಳಾದ ಬಹುಮಾನ್ಯ ಸಯ್ಯದುಲ್ ಉಲಮಾ ಅಸ್ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಉದ್ಘಾಟಿಸಲಿದ್ದಾರೆ.

. . . . . . .

ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಗೌರವಾಧ್ಯಕ್ಷರಾದ ಅಸ್ಸಯ್ಯಿದ್ ಅಲಿ ತಂಙಳ್ ಕುಂಬೋಲ್, ಅಸ್ಸಯ್ಯಿದ್ ಪೂಕೋಯ ತಂಙಳ್ ಪುತ್ತೂರು, ಶೈಖುನಾ ಬಿ.ಕೆ. ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಸೇರಿದಂತೆ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಸುಳ್ಯ ತಾಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಶಂಸುದ್ದೀನ್, SKSSF ದ.ಕ. ಈಸ್ಟ್ ಜಿಲ್ಲಾಧ್ಯಕ್ಷ ಪಿ.ಎ. ಝಕರಿಯ ಮರ್ಧಾಳ, SKSSF ಕರ್ನಾಟಕ ರಾಜ್ಯ ಸಮಿತಿ ಉಪಾಧ್ಯಕ್ಷ ಇಕ್ಬಾಲ್ ಬಾಳಿಲ, ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ, SKSSF ಸುಳ್ಯ ವಲಯ ಅಧ್ಯಕ್ಷ ಅಕ್ಟರ್ ಕರಾವಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

ಮಗ್ರಿಬ್ ನಮಾಝಿನ ಬಳಿಕ ಕೇಂದ್ರ ಜಮಾ ಮಸೀದಿ ವಳಚ್ಚಿಲ್, ಮಂಗಳೂರಿನ ಖತೀಬರಾದ ಬಹುಮಾನ್ಯ ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಕೆ.ಸಿ. ಹಸೈನಾರ್ ವಹಿಸಲಿದ್ದಾರೆ. ಸಮಾರಂಭದಲ್ಲಿ ವಿವಿಧ ಮಸೀದಿಗಳ ಪದಾಧಿಕಾರಿಗಳು, ಧಾರ್ಮಿಕ ಮುಖಂಡರು, ಉದ್ಯಮಿಗಳು ಹಾಗೂ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಕೆ.ಸಿ. ಹಸೈನಾರ್, ಪ್ರಧಾನ ಕಾರ್ಯದರ್ಶಿ ಇಖ್ಬಾಲ್ ಸುಣ್ಣಮೂಲೆ, ಮದ್ರಸ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಅಬ್ದುಲ್ಲ ತೋಟುಂಗೆರೆ ಹಾಗೂ ಪ್ರಧಾನ ಕಾರ್ಯದರ್ಶಿ ರಫೀಕ್ ಮೂಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading