ದೇಶದ ರೈತರ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಕೊಡುಗೆ ಗಣನೀಯ: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಜನರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿ ಸಂಘಗಳು ಅತ್ಯಂತ ಪೂರಕವಾಗಿವೆ. ದೇಶದ ರೈತರ ರ‍್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಕೊಡುಗೆ ಗಣನೀಯವಾಗಿದ್ದು, ಸಮಾಜದಲ್ಲಿ ಉತ್ತಮ ನಾಗರಿಕರನ್ನು ಬೆಳೆಸಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಹಾಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರದೊಂದಿಗೆ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಂಡೆಕೋಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

. . . . . . . . .

ತಾನು ಬೆಳೆದು ಇತರರನ್ನು ಬೆಳೆಸುವ ಕ್ಷೇತ್ರ:
ಸಪ್ತಾಹದ ಜಾಥಾ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, “ತಾನು ಬೆಳೆದು ಇತರರನ್ನೂ ಬೆಳೆಸುವ ಏಕೈಕ ಕ್ಷೇತ್ರವೆಂದರೆ ಅದು ಸಹಕಾರಿ ಕ್ಷೇತ್ರ ಮಾತ್ರ. ಇಂದು ಎಷ್ಟೇ ಬ್ಯಾಂಕ್‌ಗಳು, ಖಾಸಗಿ ಫೈನಾನ್ಸ್ ಸಂಸ್ಥೆಗಳು ಬಂದರೂ ಸಹಕಾರ ಸಂಘಗಳು ತನ್ನದೇ ಆದ ಛಾಪಿನೊಂದಿಗೆ ಬೆಳೆಯುತ್ತಿವೆ. ನಾವೆಲ್ಲರೂ ಒಟ್ಟಾಗಿ ಸೇರಿ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಬೇಕು” ಎಂದರು.
ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಕುರಿತು ವಿಚಾರ ಮಂಡಿಸಿದರು.

. . . . . . .

ಗಣ್ಯರು, ಸಾಧಕರಿಗೆ ಸನ್ಮಾನ:
ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಕ್ಯಾಂಪ್ಕೋ ನರ‍್ದೇಶಕ ಎ.ವಿ. ತರ‍್ಥರಾಮ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರಭಾಕರ ನಾಯಕ್, ಎಸ್‌ಸಿಡಿಸಿಸಿ ಬ್ಯಾಂಕ್ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್ ಹಾಗೂ ಲೆಕ್ಕಪರಿಶೋಧನಾ ಇಲಾಖೆಯ ನಿವೃತ್ತ ಹಿರಿಯ ಉಪನಿರ್ದೇಶಕ ಬಾಲಸುಬ್ರಹ್ಮಣ್ಯ ಭಟ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಪರಾಹ್ನ ನಡೆದ ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ಪ್ರಗತಿಪರ ಕೃಷಿ ತಜ್ಞ ಸುರೇಶ್ ಬಲ್ಯಾಡ್ ಮಾಹಿತಿ ನೀಡಿದರು.

ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷ ಪುರುಷೋತ್ತಮ ಕಾಡುಸೋರಂಜ, ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಜಿ., ದ.ಕ. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಸಂಘದ ನಿರ್ದೇಶಕ ಕೇಶವ ಮೂರ್ತಿ ಹೆಬ್ಬಾರ್, ಲಕ್ಷ್ಮಣ ಉಗ್ರಾಣಿಮನೆ, ಲಿಂಗಪ್ಪ ಗೌಡ ಬದಿಕಾನ, ಉಮೇಶ ಮಂಡೆಕೋಲು, ಅಶಿಕ್ ದೇವರಗುಂಡ, ರಾಜಣ್ಣ ಎಂ.ಕೆ., ಶಶಿಧರ ಕೆ., ಸದಾನಂದ ಮಡಿವಾಳಮೂಲೆ, ತುಳಸಿ ದೇವರಗುಂಡ, ಜಯಶ್ರೀ ಸಿ.ಎಸ್. ಉಪಸ್ಥಿತರಿದ್ದರು.

ಮಂಡೆಕೋಲು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಸ್ವಾಗತಿಸಿದರು. ಎಸ್ ವಿ. ಹಿರೇಮಠ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಸಿಇಒ ವಂದಿಸಿದರು.
ಕಾರ್ಕಳ ಭುವನೇಂದ್ರ ಪ್ರೌಢಶಾಲೆಯ ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading