ನ. 23 ಮತ್ತು ನ. 24ರಂದು ಎನ್ಎಂಸಿಯಲ್ಲಿ ಅಂತರ ಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನ. 23 ಮತ್ತು 24ರಂದು ಅಂತರ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

. . . . . . . . .

ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು. ಬಾಲಕರು ಮತ್ತು ಬಾಲಕಿಯರಿಗಾಗಿ ಕಬಡ್ಡಿ, ವಾಲಿಬಾಲ್, ಚೆಸ್, ಕ್ಯಾರಂ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ. ಫುಟ್ಬಾಲ್ ಪಂದ್ಯಾಟ ಬಾಲಕರಿಗೆ ಹಾಗೂ ಥ್ರೋಬಾಲ್ ಸ್ಪರ್ಧೆ ಬಾಲಕಿಯರಿಗೆ ಆಯೋಜಿಸಲಾಗಿದೆ.

. . . . . . .

ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ಮೇಲ್ಕಂಡ ಎಲ್ಲಾ ಕ್ರೀಡಾ ಸ್ಪರ್ಧೆಗಳನ್ನು ಪ್ರತ್ಯೇಕವಾಗಿ ನಡೆಸಲಾಗುವುದು.

ಸುಳ್ಯ, ಪುತ್ತೂರು, ಕಡಬ ಹಾಗೂ ಕೊಡಗು ತಾಲೂಕಿನ ಎಲ್ಲಾ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು ತಮ್ಮ ತಂಡಗಳೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕಾಲೇಜಿನ ಆಡಳಿತ ಮಂಡಳಿ ಆಹ್ವಾನಿಸಿದೆ.

ಭಾಗವಹಿಸಲು ಇಚ್ಛಿಸುವ ಶಾಲಾ ಮತ್ತು ಪದವಿಪೂರ್ವ ಕಾಲೇಜುಗಳು ನ. 18ರೊಳಗೆ ತಂಡಗಳನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ 9480207621 ಅಥವಾ 9916424844 ಸಂಖ್ಯೆಯನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading