ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಸಂಪಾಜೆ: ಗ್ರಾಮದ ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸೊಸೈಟಿ ಉಪಾಧ್ಯಕ್ಷರಾದ ಯಮುನಾ ಬಿ.ಎಸ್. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಮೀರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

. . . . . . .

ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಪೋಷಕರ ಸ್ಪರ್ಧೆಗಳ ವಿಜೇತರಿಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸುಮತಿ ಶಕ್ತಿವೇಲು ಮತ್ತು ಜಿ.ಕೆ. ಹಮೀದ್ ಗೂನಡ್ಕ ಅವರು ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಸಿಎಚ್‌ಒ ಚಿತ್ರಕಲಾ, ಆಶಾ ಕಾರ್ಯಕರ್ತೆ ಸವಿತಾ ರೈ ಹಾಗೂ ಯಶಸ್ವಿ ಯುವಕ ಮಂಡಲದ ಸುಧಾ ಬಾಚಿಗದ್ದೆ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಹರ್ಷಿತಾ ಸ್ವಾಗತಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading