ಬಾಳುಗೋಡು: ಪದಕ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ – ₹1.75 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ

ಬಾಳುಗೋಡು: ಸುಳ್ಯ ವಿಧಾನಸಭಾ ಕ್ಷೇತ್ರದ ನಡುಗಲ್ಲು–ಹರಿಹರ ಪಲ್ಲತ್ತಡ್ಕ–ಬಾಳುಗೋಡು ರಸ್ತೆಯ ಪದಕ ಎಂಬಲ್ಲಿ ಮುಳುಗುಸೇತುವೆ ಇದ್ದಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸಿದರು.

. . . . . . . . .

ಸುಳ್ಯ ವಿಧಾನಸಭಾ ಕ್ಷೇತ್ರದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಕೈಗೊಳ್ಳಬೇಕಾದ ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಯೋಜನೆಯಡಿ ಅನುದಾನ ಒದಗಿಸುವಂತೆ ಶಾಸಕರು ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಿದ್ದರು. ಐದು ಸೇತುವೆಗಳ ನಿರ್ಮಾಣಕ್ಕಾಗಿ ಒಟ್ಟು ₹5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು.

. . . . . . .

ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ₹5 ಕೋಟಿ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದರು. ಈ ಅನುದಾನದಡಿ ಪದಕ ಸೇತುವೆ ನಿರ್ಮಾಣಕ್ಕೆ ₹175 ಲಕ್ಷ (₹1.75 ಕೋಟಿ) ಅಂದಾಜು ವೆಚ್ಚ ನಿಗದಿಪಡಿಸಲಾಗಿದೆ.

ಗುದ್ದಲಿಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿ ಪದಕ ಸೇತುವೆಯ ಫಲಾನುಭವಿಗಳು ಹಳೆಯ ಸೇತುವೆಗೆ ಹಾಲು ಹೊಯ್ದು, ಅದರೊಂದಿಗಿನ ಭಾವನಾತ್ಮಕ ಸಂಬಂಧವನ್ನು ಸ್ಮರಿಸಿ, ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಎ.ವಿ. ತೀರ್ಥರಾಮ, ಕೃಷ್ಣಯ್ಯ ಮೂಲೆತೋಟ, ವಿನಯ್ ಮುಳುಗಾಡು, ಚಂದ್ರಹಾಸ ಶಿವಾಲ, ಹಿಮ್ಮತ್ ಕೆ.ಸಿ. ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮಾತೆಯವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading