ಕೆಮ್ಮನಬಳ್ಳಿ ತೋಟಕ್ಕೆ ಕಾಡಾನೆ ದಾಳಿ: ಕೃಷಿ ಹಾನಿ ಪರಿಶೀಲಿಸಿದ ಅರಣ್ಯಾಧಿಕಾರಿಗಳು

ಜಾಲ್ಸೂರು, ನ.14: ಜಾಲ್ಸೂರು ಗ್ರಾಮದ ಕೆಮ್ಮನಬಳ್ಳಿಯ ದಿವಾಕರ ಭಟ್ ಅವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಗಸ್ತು ಅರಣ್ಯಾಧಿಕಾರಿ ಖ್ಯಾತಲಿಂಗ ಅವರೊಂದಿಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

. . . . . . . . .

ನ.14ರ ಮುಂಜಾನೆ 3 ಗಂಟೆಯ ಸುಮಾರಿಗೆ ಒಂಟಿ ಕಾಡಾನೆಯೊಂದು ದಿವಾಕರ ಭಟ್ ಅವರ ತೋಟಕ್ಕೆ ನುಗ್ಗಿ ಕೃಷಿ ಬೆಳೆಗಳಿಗೆ ಹಾನಿ ಮಾಡಿದೆ. ಬಳಿಕ ಕಾಡಾನೆಯು ಆನೆಗುಂಡಿ ರಕ್ಷಿತಾರಣ್ಯದ ಕಡೆಗೆ ತೆರಳಿರುವುದಾಗಿ ತಿಳಿದುಬಂದಿದೆ.

. . . . . . .

ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಆನೆಗಳ ಸಂಚಾರ ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಸಾರ್ವಜನಿಕರು ರಾತ್ರಿ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading